ಸಿಬಿಐ ಕೋರ್ಟ್ ನಲ್ಲಿ ನ.25ರಂದು ರೋಷನ್ ಬೇಗ್ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು, ನ.24: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ನಾಳೆ ಸಿಬಿಐ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ.
ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ 36ನೆ ಆರೋಪಿಯಾಗಿದ್ದು, ರೋಷನ್ ಬೇಗ್ ಅವರ ಪರ ವಕೀಲರು ಜಾಮೀನು ಕೋರಿ ಸಿಬಿಐ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬೇಗ್ ಸಲ್ಲಿಸಿರುವ ಅರ್ಜಿ ನ.25ರಂದು ವಿಚಾರಣೆಗೆ ನಿಗದಿಯಾಗಿದೆ.
ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸಿಬಿಐಗೆ ಕೋರ್ಟ್ ಸೂಚನೆ ನೀಡಿದೆ. ನ.23ರಂದು ಸಿಬಿಐ ಅಧಿಕಾರಿಗಳ ತಂಡ ರೋಷನ್ ಬೇಗ್ ಅವರ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿತ್ತು.
Next Story