ಯುವಕನ ಕೊಲೆ
ಬೆಂಗಳೂರು, ನ. 29: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಂಗೋಡನಹಳ್ಳಿ ಮಾರಮ್ಮನ ದೇವಸ್ಥಾನ ಬಳಿ ಈ ಘಟನೆ ನಡೆದಿದ್ದು, ಸಾಹಿಲ್ ಎಂಬಾತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳ ಗುಂಪು ದಾಳಿ ನಡೆಸಿ, ಸಾಹಿಲ್ ಅನ್ನು ಕೊಲೆಗೈದಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದ್ದು, ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story