ಇತ್ತೀಚೆಗಷ್ಟೇ ಜೈಲಿನಿಂದ ಹೊರಬಂದಿದ್ದ ಯುವಕನ ಕೊಲೆ
ಬೆಂಗಳೂರು, ಡಿ.12: ಇತ್ತೀಚೆಗಷ್ಟೇ ಜೈಲಿನಿಂದ ಹೊರಬಂದಿದ್ದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಾರಾಯಿಪಾಳ್ಯದ ನಿವಾಸಿ ತನ್ವೀರ್(26) ಕೊಲೆಯಾದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಯತ್ನ ಪ್ರಕರಣವೊಂದರಲ್ಲಿ ತನ್ವೀರ್ ಜೈಲಿಗೆ ಹೋಗಿದ್ದು, ಜಾಮೀನಿನ ಮೇಲೆ ಇತ್ತೀಚಿಗೆ ಜೈಲಿನಿಂದ ಹೊರಬಂದಿದ್ದ. ಶುಕ್ರವಾರ ರಾತ್ರಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಸಾರಾಯಿಪಾಳ್ಯದ ರಸ್ತೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದ್ದಾರೆ.
ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಸಂಪಿಗೆಹಳ್ಳಿ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story