ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣ: ನಟಿ ಸಂಜನಾ ವಿಚಾರಣೆಗೆ ಹಾಜರು
ಬೆಂಗಳೂರು, ಡಿ.26: ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿ ಜಾಮೀನಿನ ಮೇರೆಗೆ ಬಿಡುಗಡೆಯಾಗಿರುವ ನಟಿ ಸಂಜನಾ ಗಲ್ರಾನಿ ಸಿಸಿಬಿ ತನಿಖಾಧಿಕಾರಿಗಳ ಮುಂದೆ ಶನಿವಾರ ವಿಚಾರಣೆಗೆ ಹಾಜರಾದರು.
ತನಿಖಾಧಿಕಾರಿಯಾದ ಇನ್ಸ್ಪೆಕ್ಟರ್ ಪುನೀತ್ ನೇತೃತ್ವ ತಂಡ ಸಂಜನಾ ಅವರ ಸಹಿಯನ್ನು ಪಡೆದು, ಅವರ ಹೇಳಿಕೆಗಳನ್ನು ದಾಖಲು ಮಾಡಿಕೊಂಡರು.
ಸ್ಯಾಂಡಲ್ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ಸಂಜನಾ ಅವರಿಗೆ ಅನಾರೋಗ್ಯ ಹಿನ್ನೆಲೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿ, 15 ದಿನಕ್ಕೊಮ್ಮೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂದು ತಾಕೀತು ಮಾಡಿತ್ತು.
ಈ ಹಿನ್ನೆಲೆ ಸಂಜನಾ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾದರು ಎಂದು ತನಿಖಾಧಿಕಾರಿಯೊಬ್ಬರು ಮಾಹಿತಿ ನೀಡಿದರು.
Next Story