ಪೊಲೀಸ್ ಪೇದೆ ಮೇಲೆ ಹಲ್ಲೆ ಆರೋಪ: ಶಾಸಕಿ ಸೌಮ್ಯಾರೆಡ್ಡಿ ವಿರುದ್ಧ ಎಫ್ಐಆರ್
ಬೆಂಗಳೂರು, ಜ.22: ಮಹಿಳಾ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಜಯನಗರ ಶಾಸಕಿ ಸೌಮ್ಯಾರೆಡ್ಡಿ ವಿರುದ್ಧ ಇಲ್ಲಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ಇತ್ತೀಚಿಗೆ ನಗರದ ಸ್ವಾತಂತ್ರ್ಯ ಉದ್ಯಾನವನ ಮೈದಾನದಲ್ಲಿ ಕೃಷಿ ಕಾಯ್ದೆಗಳ ವಿರೋಧಿಸಿ ಕಾಂಗ್ರೆಸ್ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕಿ ಸೌಮ್ಯಾರೆಡ್ಡಿ ಅವರನ್ನು ವಶಕ್ಕೆ ಪಡೆಯಲು ಮಹಿಳಾ ಪೊಲೀಸ್ ಪೇದೆ ವಶಕ್ಕೆ ಪಡೆಯಲು ಮುಂದಾಗಿದ್ದರು. ಈ ವೇಳೆ ಹಲ್ಲೆ ಮಾಡಿದ್ದರು ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಸೌಮ್ಯಾರೆಡ್ಡಿ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಭಾರತೀಯ ನೀತಿಸಂಹಿತೆ ಕಲಂ 353 ಅಡಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
Next Story