ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ರೈತರನ್ನು ಇನ್ನಷ್ಟು ದುಃಸ್ಥಿತಿಗೆ ತಳ್ಳುವ ಷಡ್ಯಂತ್ರ: ಡಾ.ಅಶ್ವತ್ಥನಾರಾಯಣ | Vartha Bharati- ವಾರ್ತಾ ಭಾರತಿ

--

12 ಕೋಟಿ ರೂ. ವೆಚ್ಚದ ಟೊಯೋಟ-ಕಿರ್ಲೋಸ್ಕರ್‌ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ

ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ರೈತರನ್ನು ಇನ್ನಷ್ಟು ದುಃಸ್ಥಿತಿಗೆ ತಳ್ಳುವ ಷಡ್ಯಂತ್ರ: ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಜ.25: ರೈತರ ಕಲ್ಯಾಣಕ್ಕಾಗಿ ರೂಪಿಸಿರುವ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತ. ರೈತ ವಿರೋಧಿ ಕೆಲಸಗಳಲ್ಲಿ ತೊಡಗಿರುವ ಕೆಲವರು ಈ ಎಲ್ಲ ಷಡ್ಯಂತ್ರಗಳ ಹಿಂದೆ ಇದ್ದಾರೆ. ದೇಶ ಮುನ್ನಡೆಯುವುದನ್ನು ವ್ಯವಸ್ಥಿತವಾಗಿ ತಡೆಯುತ್ತಿದ್ದಾರೆ. ಯಾವುದೇ ಕಾರಣಕ್ಕೂ ರೈತರು ಆರ್ಥಿಕವಾಗಿ ಪ್ರಬಲರಾಗುವುದು ಅವರಿಗೆ ಇಷ್ಟವಿಲ್ಲ. ಯಾವತ್ತಿಗೂ ಅವರು ಮತಬ್ಯಾಂಕ್‌ನ ಬಲಿಪಶುಗಳಾಗಿಯೇ ಇರಬೇಕು ಎಂಬುದು ಅವರ ದುರದ್ದೇಶ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಟೊಯೋಟ ಕಿರ್ಲೋಸ್ಕರ್‌ ಕಂಪನಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಮಾದರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಿಲಾನ್ಯಾಸ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ 73 ವರ್ಷಗಳಲ್ಲಿ ಮಾಡಲಾಗದ್ದನ್ನು ನರೇಂದ್ರ ಮೋದಿ ಮಾಡಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಅಪಪ್ರಚಾರ ನಡೆಸುತ್ತ ರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದರು.

 ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾತ್ರ ಸೀಮಿತವಾಗಿದ್ದ ರೈತರು ಬೆಳೆದ ಬೆಳೆಗಳನ್ನು ಈಗ ಎಲ್ಲಿ ಬೇಕಾದರೂ ಮಾರಿಕೊಳ್ಳಬಹುದು. ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕತೆ ಇದ್ದರೆ ಅನ್ನದಾತನಿಗೆ ಉತ್ತಮ ಬೆಲೆ ಸಿಗುತ್ತದೆ. ದಲ್ಲಾಳಿಗೆ ಇದನ್ನು ಸಹಿಸಲು ಆಗುತ್ತಿಲ್ಲ. ಹೀಗಾಗಿಯೇ ರೈತರನ್ನು ಎತ್ತಿಕಟ್ಟಲಾಗುತ್ತಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಕೃಷಿ ಕಾಯ್ದೆಗಳಲ್ಲಿ ರೈತರಿಗೆ ಮಾರಕವಾದ ಒಂದು ಅಂಶವೂ ಇಲ್ಲ. ಸ್ವತಃ ಪ್ರಧಾನ ಮಂತ್ರಿಯೇ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲ ಅನುಮಾನಗಳನ್ನು ಬಗೆಹರಿಸಿದ್ದಾರೆ. ಇಷ್ಟಾದರೂ ಹಠಕ್ಕೆ ಬಿದ್ದು ರೈತರನ್ನು ಹಾದಿ ತಪ್ಪಿಸುತ್ತಾರೆಂದರೆ ಇದರ ಹಿಂದೆ ಯಾವುದೋ ದುರುದ್ದೇಶ ಅಡಗಿದೆ ಎಂಬ ಅನುಮಾನ ಬರುವುದು ಸಹಜ. ಇಂಥ ಜನಪರ ಕಾರ್ಯಕ್ರಮಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಡಿಸಿಎಂ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಕೃಷಿ ಕೇಂದ್ರಗಳ ಲೋಪ ಸರಿಮಾಡುತ್ತೇವೆ:

ರಾಮನಗರ ಜಿಲ್ಲೆಯ ಕೃಷಿ ಸೇವಾ ಕೇಂದ್ರಗಳಲ್ಲಿ ಲೋಪಗಳಿವೆ ಎಂದು ಸುದ್ದಿಗಾರರು ಗಮನ ಸೆಳೆದಿದ್ದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಲೋಪಗಳನ್ನು ಖಂಡಿತಾ ಸರಿಪಡಿಸಲಾಗುವುದು. ಯಾವ ಉದ್ದೇಶಕ್ಕೆ ಆ ಕೇಂದ್ರಗಳನ್ನು ಸ್ಥಾಪಿಸಲಾಗಿದೆಯೋ ಅದು ಈಡೇರಲೇಬೇಕು. ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಈ ಕೇಂದ್ರಗಳಲ್ಲಿನ ಯಂತ್ರೋಪಕರಣಗಳನ್ನು ಕೂಡಲೇ ಅರ್ಹ ಫಲಾನುಭವಿಗಳಿಗೆ ವಿತರಿಸುವಂತೆ ಆದೇಶ ನೀಡಲಾಗುವುದು ಎಂದರು.

ಆರೋಗ್ಯ ಕೇಂದ್ರದಿಂದ ಅನುಕೂಲ:

ಬಿಡದಿಯಲ್ಲಿ ಟೊಯೋಟ ಕಿರ್ಲೋಸ್ಕರ್‌ ಸಂಸ್ಥೆ ನಿರ್ಮಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರದಿಂದ ಜನರಿಗೆ ತುಂಬಾ ಅನುಕೂಲವಾಗಲಿದೆ. ಈ ಭಾಗದ ಜನರ ಆರೋಗ್ಯಕ್ಕೆ ವರದಾನವಾಗಲಿದೆ. ಅವರೇ ಇದನ್ನು ನಿರ್ವಹಣೆ ಮಾಡಬೇಕು ಎಂದು ಮನವಿ ಮಾಡಿದ್ದೇನೆ. ಅವರೂ ಒಪ್ಪಿದ್ದಾರೆ. ಇದಕ್ಕಾಗಿ ಕಂಪನಿಗೆ ಕೃತಜ್ಞನಾಗಿದ್ದೇನೆ ಎಂದು ಡಿಸಿಎಂ ಹೇಳಿದರು.

ಮಾಗಡಿ ಶಾಸಕ‌ ಮಂಜುನಾಥ, ಜಿಲ್ಲಾಧಿಕಾರಿ ಅರ್ಚನಾ, ಜಿಪಂ ಸಿಇಒ ಇಕ್ರಮ್, ಎಸ್ಪಿ ಗಿರೀಶ್, ಡಿಎಚ್ಒ ಡಾ.ನಿರಂಜನ ಈ ವೇಳೆ ಉಪಸಸ್ಥಿತರಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top