ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ಆರೋಪ: ದೂರು
ಬೆಂಗಳೂರು, ಫೆ.8: ಸಾಮಾಜಿಕ ಜಾಲತಾಣದಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪದಡಿ ಯುವಕನೋರ್ವನನ್ನು ನಗರ ಪಶ್ಚಿಮ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಆರೋಪಿ ಕಾರ್ತಿಕ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಖಾತೆ ತೆರೆದಿದ್ದ ಕಾರ್ತಿಕ್ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ ತನ್ನ ಹಾಗೂ ಇತರರ ಅಶ್ಲೀಲ ಫೋಟೊ ಹಾಗೂ ವಿಡಿಯೊಗಳನ್ನೂ ಕಳುಹಿಸಿದ್ದಾನೆ. ಬಳಿಕ ನಿನ್ನ ಅಶ್ಲೀಲ ಫೋಟೋಗಳನ್ನು ಕಳುಹಿಸು ಎಂದು ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
Next Story