ಬೆಂಗಳೂರು, ಫೆ.10: ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯನವರ 113ನೇ ಜನ್ಮ ದಿನಾಚರಣೆಯ ಅಂಗವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದ ಪಶ್ಚಿಮದ್ವಾರದ ಬಳಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.