ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 11 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ
ಬೆಂಗಳೂರು, ಫೆ.18: ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು, 11 ಲಕ್ಷರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಫೆ.16ರಂದು ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಇಂಡಿಗೊ ವಿಮಾನದಲ್ಲಿ ಆಟಿಕೆ ಚೆಂಡು ಪತ್ತೆಯಾಗಿತ್ತು. ಇದನ್ನು ಪರಿಶೀಲನೆ ನಡೆಸಿದಾಗ 11 ಲಕ್ಷ ರೂ. ಮೌಲ್ಯದ ಚಿನ್ನ ಬೆಳಕಿಗೆ ಬಂದಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
Next Story