ಮಕ್ಕಳಲ್ಲಿ ಅಪೌಷ್ಟಿಕತೆ: ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿ ಕೇಳಿದ ಹೈಕೋರ್ಟ್
ಬೆಂಗಳೂರು, ಫೆ.24: ರಾಜ್ಯದಲ್ಲಿನ ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆಗೆ ಸಂಬಂಧಿಸಿದಂತೆ ಅಂಗನವಾಡಿ ಕೇಂದ್ರಗಳ ಸುಧಾರಣೆ ಹಾಗೂ ಅಭಿವೃದ್ಧಿಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದಕ್ಕೆ ಸಂಬಂಧಿಸಿದ ವರದಿ ನೀಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ರಾಜ್ಯದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ವಿಚಾರವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅಂಗನವಾಡಿ ಕೇಂದ್ರಗಳಿಗೆ ಭೇಟಿ ಕೊಟ್ಟು ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ವರದಿಗಳನ್ನು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಪರ ವಕೀಲರು ಪೀಠಕ್ಕೆ ಸಲ್ಲಿಸಿದರು. ಇದನ್ನು ಪರಿಶೀಲಿಸಿದ ನ್ಯಾಯಪೀಠವು ವರದಿಯನ್ನು ಪ್ರಮಾಣಪತ್ರದ ಜೊತೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಮಾ. 15ಕ್ಕೆ ಮುಂದೂಡಿತು.
Next Story