ಖೋಟಾನೋಟು ಚಲಾವಣೆ ದಂಧೆ: ಆರೋಪಿ ಬಂಧನ
ಬೆಂಗಳೂರು, ಫೆ.27: ಖೋಟಾನೋಟು ಚಲಾವಣೆ ಮಾಡುತ್ತಿದ್ದ ಆರೋಪಿಯನ್ನು ಚಿಕ್ಕಜಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಜಾಲದ ರವಿ ಬಂಧಿತ ಆರೋಪಿಯಾಗಿದ್ದು, ಈತನಿಂದ 1.40 ಲಕ್ಷ ಬೆಲೆಯ ನಕಲಿ ನೋಟುಗಳನ್ನು ಜಪ್ತಿ ಮಾಡಲಾಗಿದೆ ಎಂದು ಡಿಸಿಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.
ಬಂಧಿತ ಆರೋಪಿಯ ವಿಚಾರಣೆಯನ್ನು ವಿಚಾರಣೆ ನಡೆಸಿದಾಗ ಈತನ ಜೊತೆಗಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿರುವುದು ಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ.
ಚಿಕ್ಕಜಾಲ ಬಳಿಯ ಕೃಷ್ಣ ಸಾಗರ್ ಹೋಟೆಲ್ ಬಳಿ ನಕಲಿ ನೋಟು ಮಾರಾಟ ಮಾರುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಈತನಿಂದ 500ರೂ. ಮುಖಬೆಲೆಯ 100 ನೋಟು ಹಾಗೂ 100 ರೂ. ಬೆಲೆಯ 900 ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.
Next Story