ಬೆಂಗಳೂರು: ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು, ಮಾ.1: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿವಿ ಪುರಂನ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಬಿಇ ಮೂರನೆ ಸೆಮಿಸ್ಟರ್ ವಿದ್ಯಾರ್ಥಿ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಕಾಲೇಜಿನ ನಾಲ್ಕನೇ ಮಹಡಿಯಿಂದ ಜಿಗಿದು ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ವಿವಿ ಪುರಂ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿವಿಪುರಂ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
Next Story