ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ಬೆಂಕಿ
ಬೆಂಗಳೂರು, ಮಾ.5: ನಗರದ ಹೊರವಲಯದ ಬೆಳ್ಳಂದೂರು ಕೆರೆಯ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಮತ್ತು ಲೇಕ್ ಮಾರ್ಷಲ್ಗಳು ಧಾವಿಸಿ ಕಾರ್ಯಾಚರಣೆ ಕೈಗೊಂಡು, ಬೆಂಕಿ ನಂದಿಸಿದರು.
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿ ಕಾಣಿಸಿಕೊಂಡಿದ್ದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಸ್ಥಳೀಯ ಅಧಿಕಾರಿಕಗಳು ಮಾಹಿತಿ ನೀಡಿದ್ದಾರೆ.
ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಕೆಲವರು ಹಾಕಿದ್ದ ಕಸದ ರಾಶಿಗೆ ಬೆಂಕಿ ಹಚ್ಚಿದ್ದಾರೆ. ಹಾಗಾಗಿ, ಕೆರೆಯ ಬಳಿ ಹೊಗೆ ಆವರಿಸಿಕೊಂಡಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮಾರ್ಷಲ್ಗಳು ಇದನ್ನು ಗಮನಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ ಎಂದು ಬಿಡಿಎ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
Next Story