ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ಸಚಿವರಾದ ಡಾ.ಸುಧಾಕರ್, ಸುರೇಶ್ ಕುಮಾರ್ ಭೇಟಿ
ಚಾಮರಾಜನಗರ, ಮೇ 3: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 23 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚಾಮರಾಜನಗರ ಕೋವಿಡ್ ಆಸ್ಪತ್ರೆಗೆ ಇಂದು ಅಪರಾಹ್ನ ಆಗಮಿಸಿದ್ದಾರೆ.
ಅಪರಾಹ್ನ 2 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿದ ಇಬ್ಬರು ಸಚಿವರು ನೇರವಾಗಿ ಕೋವಿಡ್ ಆಸ್ಪತ್ರೆಗೆ ತೆರಳಿ ಅಲ್ಲಿನ ವೈದ್ಯಾಧಿಕಾರಿಗಳ ಕೊಠಡಿಯಲ್ಲಿ ವೈದ್ಯರು ಮತ್ತು ಜಿಲ್ಲಾಧಿಕಾರಿಯೊಂದಿಗೆ ಸಭೆಗೆ ಮುಂದಾದರು.
ಈ ಸಭೆಯಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸ್ಥಳೀಯ ಶಾಸಕ ಸಿ. ಪುಟ್ಟರಂಗಶೆಟ್ಟಿ, ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ, ಮೆಡಿಕಲ್ ಕಾಲೇಜಿನ ಡೀನ್ ಡಾ.ಸಂಜೀವ, ಪೊಲೀಸ್ ವರಿಷ್ಠಾಧಿಕಾರಿ ದಿವ್ಯಸಾರಾ ಥಾಮಸ್ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ.
Next Story