ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಮ್ಗೆ ಮಾತೃ ವಿಯೋಗ
ಬೆಂಗಳೂರು, ಮೇ 4: ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರದ ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್ತಿನ ಸದಸ್ಯರಾಗಿರುವ ಸಿ.ಎಂ.ಇಬ್ರಾಹಿಮ್ ಅವರ ತಾಯಿ ಬಿಬಿ ಸಾರಾ(93) ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ನಗರದ ಬೆನ್ಸನ್ಟೌನ್ನಲ್ಲಿರುವ ಇಬ್ರಾಹಿಮ್ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು. ಮೃತರ ದಫನ್ ಕಾರ್ಯವನ್ನು ಅಸರ್ ನಮಾಝ್ ನಂತರ ಖುದ್ದೂಸ್ ಸಾಹೇಬ್ ಖಬರಸ್ಥಾನದಲ್ಲಿ ಕುಟುಂಬ ಸದಸ್ಯರು ಹಾಗೂ ಬಂಧುಗಳ ಸಮ್ಮುಖದಲ್ಲಿ ನೆರವೇರಿಸಲಾಯಿತು.
Next Story