ಬೆಂಗಳೂರು: ಬೆಡ್ ಬ್ಲಾಕಿಂಗ್ ಪ್ರಕರಣ; ಪ್ರತಿಷ್ಠಿತ ಆಸ್ಪತ್ರೆಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರು, ಮೇ 8: ಕೋವಿಡ್ ಸಂದರ್ಭದಲ್ಲಿ ಬೆಡ್ ಬ್ಲಾಕಿಂಗ್ ಪ್ರಕರಣ ಆರೋಪ ಪ್ರಕರಣ ಸಂಬಂಧ ಹಲವು ಪ್ರತಿಷ್ಠಿತ ಆಸ್ಪತ್ರೆಗಳ ಮೇಲೆ ಸಿಸಿಬಿ ತನಿಖಾಧಿಕಾರಿಗಳು ದಾಳಿ ನಡೆಸಿದ್ದಾರೆ.
ಶನಿವಾರ ಮಧ್ಯಾಹ್ನ ಸುಮಾರಿಗೆ ನಗರ ವ್ಯಾಪ್ತಿಯ ಪ್ರತಿಷ್ಠಿತ 16 ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು, ರೋಗಿಗಳ ದಾಖಲಾತಿ, ವೈದ್ಯರ ಕಾರ್ಯ ನಿರ್ವಹಣೆ ಸೇರಿದಂತೆ ಇನ್ನಿತರೆ ಮಾಹಿತಿ ಕಲೆಹಾಕಿದರು.
ಶುಕ್ರವಾರ ಸಂಜೆ ಹೊತ್ತಿಗೆ 18 ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಅಲ್ಲಿನ ದತ್ತಾಂಶ ಪಡೆದಿದ್ದಾರೆ. ಈಗಾಗಲೇ ಬಂಧನಕ್ಕೊಳಗಾಗಿರುವ ನಾಲ್ವರು ವೈದ್ಯಕೀಯ ಸಿಬ್ಬಂದಿಯ ಮೊಬೈಲ್ ಕರೆಗಳನ್ನು ಆಧಾರಿಸಿ ಈ ದಾಳಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
Next Story