ಬಿಬಿಎಂಪಿ ಬೆಡ್ ಬ್ಲಾಕಿಂಗ್ ಹಗರಣ: ಮತ್ತೊಬ್ಬ ಆರೋಪಿ ಬಂಧನ
ಬೆಂಗಳೂರು, ಮೇ 12: ಬೆಡ್ ಬ್ಲಾಕಿಂಗ್ ಹಗರಣದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿರುವ ಆಂಥೋಣಿ ಬಂಧಿತ ಆರೋಪಿ ಆಗಿದ್ದಾನೆ.
ಈತ ಕೊರೋನ ಸೋಂಕಿತರಿಗೆ ಬೆಡ್ ಕೊಡಿಸುವುದಾಗಿ ನಂಬಿಸಿ ಹಣ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ. ಆಂಥೋಣಿ ಸೋಂಕಿತರಿಗೆ ಬೆಡ್ ಕೊಡಿಸುವ ನೆಪದಲ್ಲಿ ಹಣ ವಸೂಲಿ ಮಾಡುತ್ತಿದ್ದಾನೆ ಎಂಬ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಆತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಡ್ ಬ್ಲಾಕಿಂಗ್ ಹಗರಣದಲ್ಲಿ ಇದುವರೆಗೂ ಸಿಸಿಬಿ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಇನ್ನು ಕೆಲವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು ಬೆಡ್ ಬ್ಲಾಕಿಂಗ್ ಹಗರಣದಲ್ಲಿ ತೊಡಗಿಸಿಕೊಂಡಿದ್ದ ಮತ್ತೆ ಕೆಲವರನ್ನು ಸಿಸಿಬಿ ಪೊಲೀಸರು ಬಂಧಿಸುವ ಸಾಧ್ಯತೆಗಳಿವೆ.
Next Story