ರೆಮ್ಡೆಸಿವಿರ್ ಅಕ್ರಮ ಮಾರಾಟ ಆರೋಪ: ಓರ್ವನ ಸೆರೆ
ಬೆಂಗಳೂರು, ಮೇ 15: ಕೋವಿಡ್ ಸಂಬಂಧ ರೆಮ್ಡೆಸಿವಿರ್ ಚುಚ್ಚುಮದ್ದು ಅಕ್ರಮವಾಗಿ ಮಾರುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಓರ್ವನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಮಾರುತಿ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಆರೋಪಿ ಮಾರುತಿ ಕೆಲಸ ಮಾಡುತ್ತಿದ್ದ. ತನ್ನ ಬಳಿ ಅಕ್ರಮವಾಗಿ ಚುಚ್ಚುಮದ್ದು ಸಂಗ್ರಹಿಸಿಟ್ಟುಕೊಂಡು ಕೋವಿಡ್ ಸೋಂಕಿತರು ಹಾಗೂ ಅವರ ಸಂಬಂಧಿಕರಿಗೆ ದುಬಾರಿ ಬೆಲೆಗೆ ಮಾರುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಗೊತ್ತಾಗಿದೆ.
ಆತನಿಂದ ರೆಮ್ಡೆಸಿವಿರ್ ಚುಚ್ಚುಮದ್ದಿನ 9 ಬಾಟಲಿಗಳನ್ನು ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಆತನ ವಿರುದ್ಧ ತಿಲಕ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.
Next Story