ಬೆಂಗಳೂರು: 107 ವರ್ಷದ ವೃದ್ಧೆ ಕೋವಿಡ್ನಿಂದ ಸಂಪೂರ್ಣ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ
ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 24: ಕೋವಿಡ್ ಸೋಂಕಿಗೆ ಗುರಿಯಾಗಿದ್ದ ಶತಾಯುಷಿಯೊಬ್ಬರು ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದಾರೆ.
107 ವರ್ಷದ ಶತಾಯುಷಿ ಅವರಿಗೆ 20 ದಿನದ ಹಿಂದೆ ಕೋವಿಡ್ ಸೋಂಕು ದೃಢಪಟ್ಟಿದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೃದ್ಧೆಯ ಪುತ್ರ ಶಂಕರ್ ಎಂಬವರು ವೈದ್ಯರಾಗಿದ್ದು, ಇವರೇ ಚಿಕಿತ್ಸೆ ನೀಡಿದ್ದಾರೆ.
ಚಿಕಿತ್ಸೆಗೆ ಸ್ಪಂದಿಸಿದ ಶತಾಯುಷಿ ಸೋಮವಾರ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಹೀಗಾಗಿ ಇವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕರೆದುಕೊಂಡು ಹೋಗಲಾಗಿದೆ.
Next Story