ಸರಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ, ಮುಖ್ಯಮಂತ್ರಿ ಬದಲಾವಣೆ ಇಲ್ಲ: ಅರುಣ್ ಸಿಂಗ್ ಸ್ಪಷ್ಟನೆ | Vartha Bharati- ವಾರ್ತಾ ಭಾರತಿ

--

ಬೆಂಗಳೂರಿಗೆ ಆಗಮಿಸಿದ ಬಿಜೆಪಿ ರಾಜ್ಯ ಉಸ್ತುವಾರಿ

ಸರಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ, ಮುಖ್ಯಮಂತ್ರಿ ಬದಲಾವಣೆ ಇಲ್ಲ: ಅರುಣ್ ಸಿಂಗ್ ಸ್ಪಷ್ಟನೆ

ಬೆಂಗಳೂರು, ಜೂ.16: ಪಕ್ಷ ಸಂಘಟನೆ ಮತ್ತು ಕೋವಿಡ್ ಸಂಬಂಧ ನಾನು ಇಲ್ಲಿ ಚರ್ಚೆ ಮಾಡಲಿದ್ದೇನೆ. ರಾಜ್ಯ ಸರಕಾರವು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು.

ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರಕಾರ ಎರಡು ಪ್ಯಾಕೇಜ್‍ಗಳ ಮೂಲಕ ಸಂಕಷ್ಟದಲ್ಲಿರುವವರಿಗೆ ನೆರವಾಗಿದೆ. 1,250 ಕೋಟಿ ರೂಪಾಯಿ ಮತ್ತು 500 ಕೋಟಿ ರೂಪಾಯಿಯ ಎರಡು ಪ್ಯಾಕೇಜ್ ಪ್ರಕಟಿಸಲಾಗಿದೆ. ಅಲ್ಲದೆ, ಕೋವಿಡ್‍ನಿಂದ ಮೃತಪಟ್ಟ ಬಡವರಿಗೆ ತಲಾ ಒಂದು ಲಕ್ಷ ನೀಡಲು 300 ಕೋಟಿ ನೀಡುವುದಾಗಿ ರಾಜ್ಯ ಸರಕಾರ ಪ್ರಕಟಿಸಿದ್ದು, ಇವೆಲ್ಲವೂ ಉತ್ತಮ ಕ್ರಮಗಳಾಗಿವೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವರು, ಸಿಎಂ ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ಕ್ವಾರಂಟೈನ್‍ನಲ್ಲಿ ಇದೆ. ಕಾಂಗ್ರೆಸ್‍ನವರು ಕಚ್ಚಾಟದಲ್ಲಿ ನಿರತರಾಗಿದ್ದಾರೆ ಎಂದು ಟೀಕಿಸಿದ ಅವರು, ಕೋವಿಡ್ ಸಂಕಷ್ಟದಲ್ಲಿರುವವರಿಗೆ ನೆರವಾಗುವ ನಿಟ್ಟಿನಲ್ಲಿ ಪಕ್ಷವು “ಸೇವಾ ಹೀ ಸಂಘಟನ್” ಮೂಲಕ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದೆ ಎಂದು ತಿಳಿಸಿದರು.

ಇದಕ್ಕೂ ಮೊದಲು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ಅತ್ಯುತ್ತಮ ರೀತಿಯಲ್ಲಿ ಸೇವೆ ಮಾಡಿದೆ. ಕಾಂಗ್ರೆಸ್-ಜೆಡಿಎಸ್ ಪಕ್ಷದವರು ಜನಸೇವೆ ಮಾಡಿಲ್ಲ. ಜನರು ಕಾಂಗ್ರೆಸ್‍ನ ಕಾರ್ಯವೈಖರಿಯನ್ನು ಗಮನಿಸುತ್ತಾರೆ ಎಂದು ಅವರು ತಿಳಿಸಿದರು.

ಸೇವೆಯೇ ಸಂಘಟನೆ ಎಂಬ ಮಾದರಿಯಲ್ಲಿ ಪಕ್ಷ ಮತ್ತು ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಸಸಿ ನೆಡುವ ಕಾರ್ಯ ನಡೆಯುತ್ತಿದೆ. ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ ಎಂದು ಅವರು ತಿಳಿಸಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top