ಬೆಂಗಳೂರು ವಿವಿ: ಪಿಎಚ್ಡಿ ನೋಂದಣಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು, ಜು.5: 2019ರಲ್ಲಿ ಪಿಎಚ್ಡಿ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗಗಳಲ್ಲಿರುವ ಮಾರ್ಗದರ್ಶಕರುಗಳ ಬಳಿ ಬಾಕಿ ಉಳಿದಿರುವ ಸೀಟುಗಳಿಗಾಗಿ 2ನೇ ಸುತ್ತಿನ ಹಂಚಿಕೆ ಪ್ರಕ್ರಿಯೆ ಜು.20ರಂದು ನಡೆಯಲಿದೆ.
ಜು.20ರಂದು ಬೆಂಗಳೂರು ವಿಶ್ವವಿದ್ಯಾಲಯದ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗಗಳಲ್ಲಿ ಬೆಳಗ್ಗೆ 9.30ಕ್ಕೆ ಪ್ರವೇಶ ಪ್ರಕ್ರಿಯೆ ನಡೆಸಲಾಗುವುದೆಂದು ತಿಳಿಸಲಾಗಿದೆ. ಬಾಕಿ ಉಳಿದಿರುವ ಸೀಟುಗಳ ವಿವರಗಳನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್ಸೈಟ್ನಲ್ಲಿ ಶೀಘ್ರವಾಗಿ ಪ್ರಕಟಿಸಲಾಗುವುದು. ಮೊದಲನೇ ಸುತ್ತಿನ ಪ್ರವೇಶ ಪ್ರಕ್ರಿಯೆಯಲ್ಲಿ ಗೈರು ಹಾಜರಾದ ಹಾಗೂ ಸೀಟುಗಳು ಹಂಚಿಕೆಯಾಗದ ಅರ್ಜಿದಾರರು 2ನೇ ಸುತ್ತಿನ ಪ್ರವೇಶ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story