ಬೆಂಗಳೂರು: ಕಳವು ಪ್ರಕರಣ; ಬಂಧನ
ಬೆಂಗಳೂರು, ಜು.22: ಕಳವು ಪ್ರಕರಣ ಸಂಬಂಧ ಓರ್ವನನ್ನು ಇಲ್ಲಿನ ಸಿಕೆ ಅಚ್ಚಕಟ್ಟು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪ್ರಕಾಶ್ ಯಾನೆ ಜಂಗ್ಲಿ ಎಂಬಾತ ಬಂಧಿತ ಆರೋಪಿಯಾಗಿದ್ದು, ಈ ಹಿಂದೆಯೂ ಕಳವು ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಬಂಧಿತ ಆರೋಪಿಯಿಂದ 8 ಲಕ್ಷ ಮೌಲ್ಯದ 183 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Next Story