ಕನ್ನಡದ ಹಿರಿಯ ನಟಿ ಜಯಂತಿ ನಿಧನ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ (76) ಅವರು ರವಿವಾರ ರಾತ್ರಿ ನಿಧನರಾಗಿದ್ದಾರೆ.
ಸುಮಾರು 500 ಚಿತ್ರಗಳಲ್ಲಿ ನಟಿಸಿದ್ದ ಜಯಂತಿ, ಅಭಿನಯ ಶಾರದೆ ಎಂದು ಅಭಿಮಾನದಿಂದ ಕರೆಸಿಕೊಂಡಿದ್ದರು.
ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದರು.1945ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ನಟಿ ಜಯಂತಿ ಅವರು ವಿಷ್ಣುವರ್ಧನ್, ಉದಯ್ ಕುಮಾರ್, ಕಲ್ಯಾಣ್ ಕುಮಾರ್, ಶ್ರೀನಾಥ್ ಮುಂತಾದ ನಟರ ಜೊತೆ ಅಭಿನಯಿಸಿದ್ದಾರೆ.
Next Story