ಕೇರಳ-ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರು ಕೋವಿಡ್ ಲಸಿಕೆ ಪಡೆದಿದ್ದರೂ ನೆಗೆಟಿವ್ ವರದಿ ಕಡ್ಡಾಯ | Vartha Bharati- ವಾರ್ತಾ ಭಾರತಿ

--

ಕೇರಳ-ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರು ಕೋವಿಡ್ ಲಸಿಕೆ ಪಡೆದಿದ್ದರೂ ನೆಗೆಟಿವ್ ವರದಿ ಕಡ್ಡಾಯ

ಮಂಗಳೂರು, ಜು.31: ಕೊರೋನ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವವರು ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದಿದ್ದರೆ ಅಥವಾ ಪಡೆಯದಿದ್ದರೂ ಕೂಡ 72 ಗಂಟೆಯೊಳಗೆ ಮಾಡಿಸಿರುವ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಕಡ್ಡಾಯಗೊಳಿಸಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಹೊರಡಿಸಿರುವ ಪರಿಷ್ಕೃತ ಸುತ್ತೋಲೆಯಲ್ಲಿ ವಿಮಾನ/ರೈಲು/ರಸ್ತೆ (ಬಸ್ ಮತ್ತಿತರ ಖಾಸಗಿ ವಾಹನಗಳ ಮೂಲಕ) ಮಾರ್ಗದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಯೊಳಗೆ ಮಾಡಿಸಿರುವ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗಟಿವ್ ವರದಿ ಹೊಂದುವುದು ಕಡ್ಡಾಯವಾಗಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಹೊರಡುವ ಎಲ್ಲಾ ವಿಮಾನಗಳಿಗೂ ಇದು ಅನ್ವಯವಾಗುತ್ತದೆ ಎಂದು ಸ್ಪಷ್ಪಡಿಸಿದ್ದಾರೆ. 72 ಗಂಟೆಯೊಳಗೆ ಮಾಡಿಸಿದ ಆರ್‌ಟಿ-ಪಿಸಿಆರ್ ನೆಗೆಟಿವ್ ಟೆಸ್ಟ್ ವರದಿಯನ್ನು ಹೊಂದುವ ಪ್ರಯಾಣಿಕರಿಗೆ ಮಾತ್ರವೇ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಯವರು ಬೋರ್ಡಿಂಗ್ ಪಾಸ್ ನೀಡಬೇಕು. ರೈಲಿನಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಆರ್‌ಟಿ-ಪಿಸಿಆರ್ ನೆಗೆಟಿವ್ ಟೆಸ್ಟ್ ವರದಿಯನ್ನು ಹೊಂದುವುದನ್ನು ರೈಲ್ವೆ ಪ್ರಾಧಿಕಾರವು ಖಚಿತಪಡಿಸಬೇಕು. ಬಸ್‌ಗಳ ಮೂಲಕ ಪ್ರಯಾಣಿಸುವವರು ಈ ವರದಿ ಹೊಂದುವುದನ್ನು ಖಾತ್ರಿಪಡಿಸುವ ಜವಾಬ್ದಾರಿ ಆಯಾ ಬಸ್‌ಗಳ ನಿರ್ವಾಹಕರದ್ದಾಗಿದೆ. ಕೇರಳದಿಂದ ಕರ್ನಾಟಕಕ್ಕೆ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ-ವಹಿವಾಟು ಸೇರಿದಂತೆ ಇತರ ಕಾರಣಗಳಿಗೆ ದಿನಂಪ್ರತಿ ಭೇಟಿ ನೀಡುವವರು ಪ್ರತೀ 15 ದಿನಗಳಿಗೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿಯನ್ನು ಹೊಂದುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

ಕೇರಳಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಮಹಾರಾಷ್ಟ್ರದ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಾಪುರ, ಕಲಬುರಗಿ, ಬೀದರ್ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ವಾಹನಗಳ (ಚಾಲಕರು/ಸಹಾಯಕರು/ಪ್ರಯಾಣಿಕರು) ತಪಾಸಣೆಗೆ ಚೆಕ್‌ಪೋಸ್ಟ್‌ಗಳನ್ನು ತೆರೆಯಬೇಕು ಮತ್ತು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ಸೂಕ್ತ ವ್ಯವಸ್ಥೆಗೊಳಿಸಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ.

ಆದರೆ ಸಾಂವಿಧಾನಿಕ ಕಾರ್ಯಕಾರಿಗಳು/ವೈದ್ಯರು/ವೈದ್ಯಕೀಯ ಸಿಬ್ಬಂದಿ ವರ್ಗ ಮತ್ತು ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. ಅಲ್ಲದೆ ಕೇರಳದಿಂದ ತುರ್ತು ಸಂದರ್ಭದಲ್ಲಿ (ಕುಟುಂಬದಲ್ಲಿ ಮರಣ ಸಂಭವಿಸಿದಲ್ಲಿ/ವೈದ್ಯಕೀಯ ಚಿಕಿತ್ಸೆ ಇತ್ಯಾದಿ)ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರ ಮಾದರಿಗಳನ್ನು ಪರೀಕ್ಷೆಗಾಗಿ ಕರ್ನಾಟಕದಲ್ಲೇ ಸಂಗ್ರಹಿಸಬೇಕು. ಈ ಪ್ರಯಾಣಿಕರ ಹೆಸರು/ವಿಳಾಸ/ಸಂಪರ್ಕ ಸಂಖ್ಯೆ ಇತ್ಯಾದಿ ಪೂರ್ಣ ವಿವರಗಳನ್ನು ಗುರುತಿನ ಚೀಟಿಯ ಆಧಾರದ ಮೇಲೆ ಪಡೆಯಲು ಮತ್ತು ಆರ್‌ಟಿಪಿಸಿಆರ್ ಪರೀಕ್ಷೆಯ ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಶಿಷ್ಟಾಚಾರದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top