ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿಯಾದ ಬ್ರಿಟಿಷ್ ಹೈ ಕಮಿಷನರ್ | Vartha Bharati- ವಾರ್ತಾ ಭಾರತಿ

--

ವಿವಿಧ ಕ್ಷೇತ್ರಗಳಲ್ಲಿ ಸಹಕಾರ ಕುರಿತು ಚರ್ಚೆ

ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿಯಾದ ಬ್ರಿಟಿಷ್ ಹೈ ಕಮಿಷನರ್

ಬೆಂಗಳೂರು : ಭಾರತದ ಬ್ರಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಬಲಪಡಿಸುವ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯದ ಹೂಡಿಕೆದಾರ ಸ್ನೇಹಿ ವಾತಾವರಣದ ಸದುಪಯೋಗ ಪಡೆಯುವಂತೆ ಮುಖ್ಯಮಂತ್ರಿಗಳು ಬ್ರಿಟಿಷ್ ಹೈ ಕಮಿಷನರ್ ಅವರಿಗೆ ಸಲಹೆ ಮಾಡಿದರು.

ಕರ್ನಾಟಕ  ಅತ್ಯಂತ ಪ್ರಗತಿ ಪರ ರಾಜ್ಯವಾಗಿದ್ದು, ಹೂಡಿಕೆಗೆ ಅತ್ಯುತ್ತಮ ಪೂರಕ ವಾತಾವರಣ ಹೊಂದಿದೆ. ಕೈಗಾರಿಕೋದ್ಯಮಗಳ ಸ್ಥಾಪನೆಗೆ ತ್ವರಿತ ಅನುಮೋದನೆ ನೀಡುವ ವ್ಯವಸ್ಥೆ ಜಾರಿಯಲ್ಲಿದೆ. ತಂತ್ರಜ್ಞಾನ, ಶಿಕ್ಷಣದಲ್ಲಿ ಮುನ್ನಡೆ ಸಾಧಿಸಿರುವ ರಾಜ್ಯವಾಗಿದ್ದು, ಅತ್ಯುತ್ತಮ ಕುಶಲ ಮಾನವ ಸಂಪನ್ಮೂಲವನ್ನೂ ಹೊಂದಿದೆ. ಯು.ಕೆ. ಮೂಲದ ಹಲವು ಪ್ರತಿಷ್ಠಿತ ಕಂಪೆನಿಗಳಿಗೆ ನೆಲೆಯಾಗಿದ್ದು, ಯು.ಕೆ. ಮೂಲದ ಕಂಪೆನಿಗಳು ಗಣನೀಯವಾಗಿ ಹೂಡಿಕೆ ಮಾಡಿವೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಆರೋಗ್ಯ, ಸಂಸ್ಕೃತಿ, ಭಾಷಾ ವಿಷಯಗಳು ಹೀಗೆ ವಿವಿಧ ಕ್ಷೇತ್ರಗಳಿಗೆ ಪ್ರತ್ಯೇಕ ವಿಶ್ವವಿದ್ಯಾಲಯಗಳನ್ನು ಹೊಂದಿರುವ ಕರ್ನಾಟಕದಲ್ಲಿ ಅತಿ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ವಿವಿಧ ಬಹುರಾಷ್ಟ್ರೀಯ ಕಂಪೆನಿಗಳ 80ಕ್ಕೂ ಹೆಚ್ಚು ಹೈ-ಟೆಕ್ ಸಂಶೋಧನಾ ಸಂಸ್ಥೆಗಳು ಇಲ್ಲಿ ಕಾರ್ಯನಿರ್ವಹಿಸುತ್ತಿವೆ. ಪೂರ್ವದ ಸಿಲಿಕಾನ್ ವ್ಯಾಲಿ ಎಂದೇ ಖ್ಯಾತವಾಗಿರುವ ಬೆಂಗಳೂರು ನಗರ ದೇಶ, ವಿದೇಶಗಳ ಜನರಿಗೆ ನೆಲೆಯಾಗಿದೆ ಎಂದು ತಿಳಿಸಿದರು.

ಇದರೊಂದಿಗೆ ಆರೋಗ್ಯ, ಶಿಕ್ಷಣ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಪರಸ್ಪರ ಸಹಯೋಗದೊಂದಿಗೆ ಕಾರ್ಯನಿರ್ವಹಿಸುವ ಕುರಿತು ಚರ್ಚೆ ನಡೆಸಲಾಯಿತು.

ಬೆಂಗಳೂರು ಸಂಚಾರ ನಿರ್ವಹಣೆಯ ಕುರಿತಂತೆ ಯು.ಕೆ. ಸಹಯೋಗದ ಕುರಿತೂ ಸಹ ಸಭೆಯಲ್ಲಿ ಚರ್ಚಿಸಲಾಯಿತು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಸಂದರ್ಭದಲ್ಲಿ ಪಠ್ಯಕ್ರಮ ರೂಪಿಸುವ ನಿಟ್ಟಿನಲ್ಲಿಯೂ ಯು.ಕೆ. ಸಹಯೋಗ ಪಡೆಯಲು ಇರುವ ಅವಕಾಶಗಳ ಕುರಿತು ಚರ್ಚಿಸಲಾಯಿತು.

ಕರ್ನಾಟಕ ಯು.ಕೆ. ಯೊಂದಿಗೆ ಹೂಡಿಕೆ ಒಪ್ಪಂದಗಳ ಜೊತೆಗೆ ಶಿಕ್ಷಣ, ಆರೋಗ್ಯ ಮತ್ತು ಹವಾಮಾನ ಬದಲಾವಣೆ ಮೊದಲಾದ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ನೀಡುವ ಕುರಿತು ಉಭಯ ನಾಯಕರು ಸಹಮತಿ ವ್ಯಕ್ತಪಡಿಸಿದರು.

ಬೆಂಗಳೂರಿನ ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ ಜೆರೆಮಿ ಬೆಡ್ ಫೋರ್ಡ್, ಸಚಿವರಾದ ಆರ್. ಅಶೋಕ್, ಡಾ. ಸಿ.ಎನ್. ಅಶ್ವತ್ಥನಾರಾಯಣ, ಮುಖ್ಯಮಂತ್ರಿಗಳ ಕಾರ್ಯದರ್ಶಿ ವಿ. ಪೊನ್ನುರಾಜ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top