ಶಾಲಾ ದಾಖಲಾತಿ ಪ್ರಕ್ರಿಯೆ ದಿನಾಂಕ ವಿಸ್ತರಿಸಿ: ಶಶಿಕುಮಾರ್
ಬೆಂಗಳೂರು, ಆ.27: 2021-22ನೇ ಶೈಕ್ಷಣಿಕ ಸಾಲಿನ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಜೂ.15ರಿಂದ ಆ.31ರವರೆಗೆ ನಿಗಧಿಪಡಿಸಲಾಗಿದೆ. ಇದನ್ನು ಮತ್ತಷ್ಟು ದಿನ ವಿಸ್ತರಿಸಬೇಕೆಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳ(ಕ್ಯಾಮ್ಸ್) ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೋವಿಡ್ ಸೇರಿದಂತೆ ನಾನಾ ಕಾರಣಗಳಿಂದ ಹಲವು ವಿದ್ಯಾರ್ಥಿಗಳು ಇನ್ನು ಶಾಲೆಗಳಿಗೆ ದಾಖಲಾಗದೆ ಇರಬಹುದು. ಅವರೆಲ್ಲರಿಗಾಗಿ ಮತ್ತಷ್ಟು ಸಮಯವನ್ನು ವಿಸ್ತರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರಕಾರ ಶಿಕ್ಷಣ, ವಿದ್ಯಾರ್ಥಿಗಳ ವಿಷಯದಲ್ಲಿ ಜಾಗರೂಕತೆಯಿಂದ ಹೆಜ್ಜೆ ಇಡಬೇಕಾಗಿದೆ. ಶಾಲೆಯಿಂದ ಒಬ್ಬ ವಿದ್ಯಾರ್ಥಿಯು ಹೊರಗುಳಿಯದಂತೆ ಕ್ರಮಗಳನ್ನು ಅನುಸರಿಸಬೇಕು. ಕನಿಷ್ಠ ಶುಲ್ಕ ಕಟ್ಟುವುದು, ಆನ್ಲೈನ್ ಇಲ್ಲವೇ ಆಫ್ಲೈನ್ನಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ನೋಡಿಕೊಳ್ಳುವುದು ಸರಕಾರದ ಜವಾಬ್ದಾರಿಯಾಗಿರುತ್ತದೆ ಎಂದು ಅವರು ಹೇಳಿದ್ದಾರೆ.
Next Story