ಶಾಲಾ ಶುಲ್ಕ ಶೇ.15ರಷ್ಟು ರಿಯಾಯಿತಿಗೆ ಹೈಕೋರ್ಟ್ ಆದೇಶ
ಬೆಂಗಳೂರು, ಸೆ.16: ಶಾಲಾ ಶುಲ್ಕವನ್ನು ಶೇ.15ರಷ್ಟು ಕಡಿತಗೊಳಿಸಲು ರಾಜ್ಯ ಹೈಕೋರ್ಟ್ ಗುರುವಾರ ಆದೇಶಿಸಿದೆ.
ಕೋವಿಡ್ ಕಾರಣಕ್ಕೆ ಖಾಸಗಿ ಶಾಲೆಗಳು ಬೋಧನಾ ಶುಲ್ಕದಲ್ಲಿ ಶೇ 30ರಷ್ಟು ಕಡಿತ ಮಾಡುವಂತೆ ರಾಜ್ಯ ಸರ್ಕಾರ 2021ರ ಜ. 29ರಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಕೆಲವು ಶಾಲಾ ಆಡಳಿತ ಮಂಡಳಿಗಳು ಹೈಕೋರ್ಟ್ ಮೆಟ್ಟಿಲೇರಿದ್ದವು. ಇದೀಗ ಸರಕಾರದ ಆದೇಶವನ್ನು ರದ್ದುಗೊಳಿಸಿರುವ ರಾಜ್ಯ ಹೈಕೋರ್ಟ್ 2020-21ರ ಶೈಕ್ಷಣಿಕ ವರ್ಷದ ಶಾಲಾ ಶುಲ್ಕದ ಗೊಂದಲಕ್ಕೆ ತೆರೆ ಎಳೆದಿದೆ.
Next Story