ನ್ಯಾಯಮೂರ್ತಿ ಮೋಹನ ಎಂ. ಶಾಂತನಗೌಡರ್ ಗೆ ನುಡಿ ನಮನ ಕಾರ್ಯಕ್ರಮ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಶನಿವಾರ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ದಿ. ಮೋಹನ ಎಂ. ಶಾಂತನಗೌಡರ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾಯಾಧೀಶರಾದ ನ್ಯಾಯಮೂರ್ತಿ ನಝೀರ್, ನ್ಯಾಯಮೂರ್ತಿ ಎ.ಎಸ್. ಬೋಪಣ್ಣ, ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ, ನ್ಯಾಯಮೂರ್ತಿ ಬಿ.ವಿ. ನಾಗರತ್ನ, ಕರ್ನಾಟಕ ಉಚ್ಛ ನ್ಯಾಯಾಲಯದ ಪ್ರಭಾರಿ ಮುಖ್ಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.