ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಸೈಕಲ್ ಜಾಥಾ
ಬೆಂಗಳೂರು: ಇಂಧನ ಬೆಲೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧಕ್ಕೆ ಕಾಂಗ್ರಸ್ ನಾಯಕರು ಹಾಗೂ ಕಾರ್ಯಕರ್ತರು ಸೈಕಲ್ ಜಾಥಾ ನಡೆಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬೆಲೆ ಏರಿಕೆಯಿಂದಾಗಿ ಹೆಣ್ಣು ಮಕ್ಕಳು ತಮ್ಮ ತಾಳಿಯನ್ನು ಮಾರಿಕೊಂಡಿದ್ದಾರೆ. ಕೇಂದ್ರ ಸರಕಾರ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಮಂತ್ರಿಗಳು, ಶಾಸಕರು, ವಿಧಾನ ಪರಿಷತ್ ಸದಸ್ಯರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧದ ವರೆಗೆ ಸೈಕಲ್ ಜಾಥಾ ನಡೆಸಿದರು.
Live from KPCC to Vidhana Soudha https://t.co/o7BQG8BAcl
— Karnataka Congress (@INCKarnataka) September 20, 2021
Next Story