ಬಿಬಿಎಂಪಿ ಚುನಾವಣೆ: ವಾರ್ಡ್ ಪಟ್ಟಿ ನೀಡಲು ಬಿಬಿಎಂಪಿ ಸಿದ್ಧ
ಬೆಂಗಳೂರು, ಅ.7: ನಾಲ್ಕು ವಾರದಲ್ಲಿ ಬಿಬಿಎಂಪಿ ಚುನಾವಣೆಗೆ ಸಂಬಂಧಪಟ್ಟಂತೆ ವಾರ್ಡ್ಗಳ ಪಟ್ಟಿಯನ್ನು ಸಲ್ಲಿಸಲು ಸಿದ್ಧವಿರುವುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿಬಿಎಂಪಿ ಚುನಾವಣೆ ಮುಂದೂಡಿಕೆ ವಿಚಾರಣೆ ಕಳೆದ ಒಂದು ವರ್ಷದಿಂದ ಸುಪ್ರೀಂಕೋರ್ಟ್ ಅಂಗಳದಲ್ಲಿ ಇತ್ತು. ಬುಧವಾರ ಸುಪ್ರೀಂಕೋರ್ಟ್ ವಾರ್ಡ್ ಪಟ್ಟಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಪಟ್ಟಿ ಸಲ್ಲಿಸಲು ಬಿಬಿಎಂಪಿ ಸಿದ್ಧವಾಗಿದೆ. 243 ವಾರ್ಡ್ಗಳಿಗೂ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುವುದು. ರಾಜ್ಯ ಸರಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬಿಬಿಎಂಪಿ ಬದ್ಧವಾಗಿರುತ್ತದೆ ಎಂದು ಹೇಳಿದರು.
ಇನ್ನು ಮಳೆಯಿಂದ ನಗರದಲ್ಲಿ ಆದ ಅನಾಹುತದ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಶೀಘ್ರವಾಗಿ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಅವರು ತಿಳಿಸಿದರು.
Next Story