ನೀಟ್ ಪರೀಕ್ಷೆ ಬಗ್ಗೆ ಸರಕಾರ ಮರು ಆಲೋಚನೆ ಮಾಡಲಿ: ಮಾಜಿ ಸಿಎಂ ಕುಮಾರಸ್ವಾಮಿ | Vartha Bharati- ವಾರ್ತಾ ಭಾರತಿ

--

ಟ್ವೀಟ್ ಡಿಲಿಟ್ ಮಾಡಿದ ಮಾಜಿ ಸಿಎಂ

ನೀಟ್ ಪರೀಕ್ಷೆ ಬಗ್ಗೆ ಸರಕಾರ ಮರು ಆಲೋಚನೆ ಮಾಡಲಿ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ನ.27: ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ವೈದ್ಯೆಯಾಗುವ ಕನಸು ಕಂಡಿದ್ದ ವಿದ್ಯಾರ್ಥಿನಿಯೊಬ್ಬಳು ದ್ವಿತೀಯ ಪಿಯುಸಿಯಲ್ಲಿ ಶೇ.96ರಷ್ಟು ಅಂಕ ಗಳಿಸಿದ್ದರೂ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಲಭಿಸದ ಕಾರಣ ಸರಕಾರಿ ಕೋಟಾದಲ್ಲಿ ಸೀಟು ವಂಚಿತಳಾಗಿದ್ದಳು. ಇದೇ ಕಾರಣಕ್ಕೆ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೊರಬ ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ನೀಟ್ ರದ್ದತಿಗೆ ಒಲವು ವ್ಯಕ್ತಪಡಿಸಿದ್ದಾರೆ.

ನೀಟ್ ಪರೀಕ್ಷೆ ಬಗ್ಗೆ ಸರಕಾರ ಮರು ಆಲೋಚನೆ ಮಾಡಬೇಕಿದೆ. ನೀಟ್ ವಿರುದ್ಧ ತಮಿಳುನಾಡು ಸರಕಾರ ಕೈಗೊಂಡಂತಹ ಕ್ರ ಕೈಗೊಳ್ಳಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅವರ ಸರಣಿ ಟ್ವೀಟ್ ನ ಪೂರ್ಣರೂಪ..

ವೈದ್ಯೆ ಆಗಬೇಕು ಎಂದು ಕನಸು ಕಂಡಿದ್ದ ವಿದ್ಯಾರ್ಥಿನಿಯೊಬ್ಬರು ದ್ವಿತೀಯ ಪಿಯುಸಿಯಲ್ಲಿ ಶೇ.96ರಷ್ಟು ಅಂಕ ಗಳಿಸಿದ್ದರೂ ಅವರಿಗೆ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬಾರದೇ ಸರಕಾರಿ ಸೀಟು ಸಿಗಲಿಲ್ಲ. ಈ ಕಾರಣಕ್ಕೆ ಆ ಹೆಣ್ಣುಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೊರಬ ತಾಲೂಕಿನ ಚನ್ನಪಟ್ಟಣ ಗ್ರಾಮದ ಸಂಕಲ್ಪ ಎಂಬ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನು ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ.

ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಹಾಗೂ ಉನ್ನತ ಶಿಕ್ಷಣ ಬಡ, ಸಾಮಾನ್ಯ ಮಕ್ಕಳಿಗೂ ಸಿಗಬೇಕು ಎನ್ನುವ ಕಾಳಜಿಯ ಜತೆಗೆ, ಯಾರೇ ವಿದ್ಯಾರ್ಥಿಗಳು ಸೀಟು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಂಕಲ್ಪ ಅವರಂತೆ ಬದುಕನ್ನು ಕೊನೆ ಮಾಡಿಕೊಳ್ಳಬಾರದು.

ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢ ಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿ.

ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ.  ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು.

ಟ್ವೀಟ್ ಡಿಲಿಟ್ ಮಾಡಿದ ಮಾಜಿ ಸಿಎಂ 

ಈ ಕುರಿತ ಟ್ವಿಟ್ ಅನ್ನು ಕುಮಾರಸ್ವಾಮಿಯವರು ಡಿಲಿಟ್ ಮಾಡಿದ್ದಾರೆ. 

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top