"ಜಾತ್ಯತೀತೆಯ ಜಪ ಮಾಡುತ್ತಲೇ ʼಸಂದೇಶ ಸನ್ನಿಧಿʼಯಲ್ಲಿ ʼಸಿದ್ಧಸೂತ್ರʼ ಹೆಣೆದ ʼರಕ್ಕಸ ರಾಜಕಾರಣʼಕ್ಕೆ ಕೊನೆಗಾಲ ಬಂದಿದೆ" | Vartha Bharati- ವಾರ್ತಾ ಭಾರತಿ

--

ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

"ಜಾತ್ಯತೀತೆಯ ಜಪ ಮಾಡುತ್ತಲೇ ʼಸಂದೇಶ ಸನ್ನಿಧಿʼಯಲ್ಲಿ ʼಸಿದ್ಧಸೂತ್ರʼ ಹೆಣೆದ ʼರಕ್ಕಸ ರಾಜಕಾರಣʼಕ್ಕೆ ಕೊನೆಗಾಲ ಬಂದಿದೆ"

ಬೆಂಗಳೂರು, ಡಿ.3: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿರುವುದನ್ನು ಟೀಕಿಸಿರುವ ಸಿದ್ದರಾಮಯ್ಯರ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ʼರಾಜಕೀಯ ರಕ್ಕಸತನʼಕ್ಕೆ ಅವರು ರಾಜಾಧಿರಾಜ. ʼರಾಜಕೀಯ ಆಶ್ರಯʼ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ʼಸಿದ್ದಸೂತ್ರಧಾರʼನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ. ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ʼಸಂದೇಶ ಸನ್ನಿಧಿʼಯಲ್ಲಿ ʼಸಿದ್ಧಸೂತ್ರʼ ಹೆಣೆದ ʼರಕ್ಕಸ ರಾಜಕಾರಣʼಕ್ಕೆ ಕೊನೆಗಾಲ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಹೆಸರನ್ನು ನೇರವಾಗಿ ಉಲ್ಲೇಖಿಸದೆ ಟೀಕಿಸಿದ್ದಾರೆ.

ಮಾಜಿ ಪ್ರಧಾನಿಯೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಎಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಯ ಕಚೇರಿಯಲ್ಲಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ. ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ʼಸಿದ್ದಕಲೆʼಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ʼರಾಜಕೀಯ ರಕ್ಕಸತನʼಕ್ಕೆ ಅವರು ರಾಜಾಧಿರಾಜ. ʼರಾಜಕೀಯ ಆಶ್ರಯʼ ನೀಡಿದ ಕಾಂಗ್ರೆಸ್ ಪಕ್ಷವನ್ನೇ ಹೆಬ್ಬಾವಿನಂತೆ ನುಂಗಲು ಹೊರಟ ʼಸಿದ್ದಸೂತ್ರಧಾರʼನಿಗೆ ರಾಜಕೀಯ ಬದುಕು ಕೊಟ್ಟು ಬೆಳೆಸಿದ ಜೆಡಿಎಸ್ ಪಕ್ಷವನ್ನು ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಆ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯ ಮೇಲೆ ʼಪಕ್ಷನಿಷ್ಠೆʼ ಎನ್ನುವ ಪದ ಎಂದಾದರೂ ಬಂದಿದೆಯಾ? ಅದಕ್ಕೆ ಆ ಪದ ʼಪರಮ ಅಪಥ್ಯʼ ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತು ಎಂದು ಟೀಕಿಸಿದ್ದಾರೆ.

ನನಗಿಲ್ಲದಿದ್ದರೆ ಯಾರಿಗೂ ಬೇಡ ಎನ್ನುವ ಸ್ವಾರ್ಥ ಮನೋಭಾವದಿಂದ ಸ್ವಪಕ್ಷವೂ ಇದ್ದ ಮೈತ್ರಿ ಸರಕಾರವನ್ನೇ ʼಸ್ವಾಹಾʼ ಮಾಡಿ ಆಪರೇಷನ್ ಕಮಲದ ಕೆಸರಿನಲ್ಲಿ ವಿಕೃತವಾಗಿ ಹೊರಳಾಡಿದವರು ಯಾರು ಎನ್ನುವುದು ಅವರ ಸ್ವಪಕ್ಷೀಯರಿಗೇ ಚೆನ್ನಾಗಿ ಗೊತ್ತು.ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ. ಇನ್ನು, ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ; ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್ʼಗಳು!! ʼಸಿದ್ದಸೂತ್ರಧಾರʼನಿಗೆ ಇದೆಲ್ಲ ಗೊತ್ತಿಲ್ಲವೇ? ಎಂದು ಪರೋಕ್ಷವಾಗಿ ಸಿದ್ದರಾಮಯ್ಯರನ್ನು ಕುಮಾರಸ್ವಾಮಿ ಕುಟುಕಿದ್ದಾರೆ.

ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ʼಸಂದೇಶ ಸನ್ನಿಧಿʼಯಲ್ಲಿ ʼಸಿದ್ಧಸೂತ್ರʼ ಹೆಣೆದ ʼರಕ್ಕಸ ರಾಜಕಾರಣʼಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ ಎಂದು ಹೇಳಿದ್ದಾರೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top