ಸ್ಮಾರ್ಟ್ ಸಿಟಿ ಕಾಮಗಾರಿ ಮುಕ್ತಾಯಕ್ಕೆ ಒಂದು ವಾರದ ಗಡುವು: ರಾಕೇಶ್ ಸಿಂಗ್
ಬೆಂಗಳೂರು, ಡಿ.11: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಮುಂದಿನ ಒಂದು ವಾರದೊಳಗೆ ಮುಕ್ತಾಯಗೊಳಿಸುವಂತೆ ಸ್ಮಾರ್ಟ್ ಸಿಟಿ ಲಿಮಿಟೆಡ್ನ ಮುಖ್ಯಸ್ಥ ಮತ್ತು ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸೂಚನೆ ನೀಡಿದ್ದಾರೆ.
ಶನಿವಾರ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿವೀಕ್ಷಣೆ ಮಾಡಿದ ರಾಕೇಶ್ ಸಿಂಗ್, ಪಾದಚಾರಿ ಮಾರ್ಗಗಳು ಮತ್ತು ರಸ್ತೆಗಳಿಗೆ ಟಾರ್ ಹಾಕುವ ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಿ, ರೋಗಿಗಳ ಆಗಮನ ನಿರ್ಗಮನಕ್ಕೆ ತೊಂದರೆಯಾಗದಂತೆ ಕೆಲಸ ಪೂರೈಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಪರಿವೀಕ್ಷಣೆ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ನಿಗಮದ ಎಂಡಿ ರಾಜೇಂದ್ರ ಚೋಳನ್, ಮುಖ್ಯ ಎಂಜಿನಿಯರ್ ವಿನಾಯಕ ಸೂಗೂರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Next Story