ರಾಜ್ಯದಲ್ಲಿ ಮತ್ತೆ 10 ಒಮೈಕ್ರಾನ್ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ (source: PTI)
ಬೆಂಗಳೂರು, ಜ.3: ರಾಜ್ಯದಲ್ಲಿ ರವಿವಾರ ಹೊಸದಾಗಿ 10 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 76ಕ್ಕೇರಿದೆ ಎಂದು ಆರೋಗ್ಯ ಸಚಿವ ಡಿ. ಸುಧಾಕರ್ ತಿಳಿಸಿದ್ದಾರೆ.
ಟ್ವೀಟ್ ಮೂಲಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಚಿವರು, ಜ.2 ರಂದು ಕರ್ನಾಟಕದಲ್ಲಿ ಹತ್ತು ಹೊಸ ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 76ಕ್ಕೆ ತಲುಪಿದೆ' ಎಂದು ಹೇಳಿದ್ದಾರೆ.
ರವಿವಾರ ಬೆಂಗಳೂರಿನಲ್ಲಿ 8 ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಐವರು ವಿದೇಶಿ ಪ್ರವಾಸ ಕೈಗೊಂಡಿದ್ದ ಹಿನ್ನೆಲೆ ಹೊಂದಿದ್ದಾರೆ. ಉಳಿದ ಎರಡು ಪ್ರಕರಣಗಳು ಧಾರವಾಡದಿಂದ ವರದಿಯಾಗಿದೆ ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.
ರಾಜ್ಯದಲ್ಲಿ ರವಿವಾರ ಒಟ್ಟು 1187 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು.
Ten new cases of Omicron have been confirmed in Karnataka on Jan 2nd taking the tally to 76:
— Dr Sudhakar K (@mla_sudhakar) January 3, 2022
Bengaluru: 8 cases (of which 5 are international travellers)
Dharwad: 2 cases#OmicronInIndia #Omicronindia #COVID19 #Karnataka @BSBommai @mansukhmandviya