ವಸತಿ ಸಚಿವ ಸೋಮಣ್ಣರಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು, ಫೆ.2: ವಸತಿ ಸಚಿವ ವಿ.ಸೋಮಣ್ಣರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಹೋಂ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, "ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಂ ಕ್ವಾರಂಟೈನ್ ನಲ್ಲಿದ್ದು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ" ಎಂದು ಮನವಿ ಮಾಡಿದ್ದಾರೆ.
Next Story