ಬೆಂಗಳೂರು: ಸ್ಪಾಗಳ ಮೇಲೆ ಸಿಸಿಬಿ ದಾಳಿ; 13 ಮಂದಿಯ ರಕ್ಷಣೆ
ಬೆಂಗಳೂರು, ಫೆ.5: ಅಕ್ರಮ ಚಟುವಟಿಕೆ ನಡೆಸುತ್ತಿದ್ದ ನಗರದ ಮೂರು ಸ್ಪಾಗಳ ಮೇಲೆ ದಾಳಿ ಮಾಡಿರುವ ಸಿಸಿಬಿ ಪೊಲೀಸರು ಹೊರದೇಶದ ಇಬ್ಬರು ಮಹಿಳೆಯರು ಸೇರಿದಂತೆ 13 ಮಂದಿಯನ್ನು ರಕ್ಷಣೆ ಮಾಡಿದ್ದಾರೆ.
ಶನಿವಾರ ಇಲ್ಲಿನ ರಾಯಲ್ ಸ್ಪಾ ಮತ್ತು ಸಲೂನ್ ಅಸ್ತೆಟಿಕ್ ಯೂನಿಸೆಕ್ಸ್ ಸಲೂನ್ ಸ್ಪಾ ಹಾಗೂ ನಿಸರ್ಗ ಆಯುರ್ವೇದಿಕ್ ಕ್ಲಿನಿಕ್ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಮಹಿಳಾ ಸಂರಕ್ಷಣಾ ದಳ ದಾಳಿ ನಡೆಸಿತು.
ಈ ಸಂದರ್ಭದಲ್ಲಿ ಹೊರದೇಶದ ಇಬ್ಬರು ಮಹಿಳೆಯರು ಸೇರಿದಂತೆ 13 ಮಹಿಳೆಯರನ್ನು ಸಂರಕ್ಷಿಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಮಂದಿ ವಿರುದ್ಧ ಎಚ್ಎಸ್ಆರ್ ಲೇಔಟ್, ಅಶೋಕನಗರ ಹಾಗೂ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story