ನ್ಯಾಯಾಧೀಶರ ಕುರಿತು ಅವಹೇಳನಕಾರಿ ಟ್ವೀಟ್ ಮಾಡಿದ ಆರೋಪ: ನಟ ಚೇತನ್ ಬಂಧನ
ಬೆಂಗಳೂರು: ನ್ಯಾಯಾಧೀಶರ ಕುರಿತು ಅವಹೇಳನಕಾರಿ ಪೋಸ್ಟ್ ಸಂಬಂಧ ನಟ ಚೇತನ್ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ ಸುಮಾರಿಗೆ ಇಲ್ಲಿನ ಕುಮಾರಕೃಪಾದಲ್ಲಿರುವ ಚೇತನ್ ನಿವಾಸಕ್ಕೆ ಆಗಮಿಸಿದ ಪೊಲೀಸರ ತಂಡವೊಂದು ಏಕಾಏಕಿ ಅವರನ್ನು ವಾಹನದಲ್ಲಿ ಕರೆದೊಯ್ದಿದ್ದಾರೆ. ಈ ವೇಳೆ ಅವರ ಪತ್ನಿ ಸೇರಿದಂತೆ ಕುಟುಂಬ ಸದಸ್ಯರಿಗೆ ತನಿಖಾಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ. ಇದರ ಬಗ್ಗೆ ಪ್ರಶ್ನಿಸಿದಾಗ ತಾವೂ ಶೇಷಾದ್ರಿಪುರಂ ಠಾಣಾ ಪೊಲೀಸರು ಎಂದಷ್ಟೇ ಉತ್ತರಿಸಿದರು ಎನ್ನಲಾಗಿದೆ.
ಇದೀಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಬಂಧಿಸಿರುವ ಶೇಷಾದ್ರಿಪುರಂ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಪೊಲೀಸರು ನೊಟೀಸ್ ಸಹ ನೀಡದೆ ನನ್ನ ಪತಿಯನ್ನು ಅಪಹರಿಸಿದ್ದಾರೆ: ನಟ ಚೇತನ್ ಪತ್ನಿ ಮೇಘ ಆರೋಪ
Next Story