ಎಸೆಸೆಲ್ಸಿ ಪರೀಕ್ಷೆ: ಸಮವಸ್ತ್ರ ಧರಿಸಿಯೇ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಸೂಚನೆ
ಬೆಂಗಳೂರು, ಮಾ.26: ಸೋಮವಾರ(ಮಾ.28)ದಿಂದ ಆರಂಭಗೊಳ್ಳಲಿರುವ ಎಸೆಸೆಲ್ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಯೇ ಹಾಜರಾಗುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಸರಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ಹಾಗೂ ಖಾಸಗಿ ಶಾಲೆಗಳಲ್ಲಿ ಅಂದರೆ ಅನುದಾನಿತ/ಅನುದಾನರಹಿತ ಶಾಲೆಗಳಲ್ಲಿ ಆಯಾ ಶಾಲಾಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಿ ವಿದ್ಯಾರ್ಥಿಗಳು ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸಮೂರ್ತಿ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.
ಎಸೆಸೆಲ್ಸಿ ಪರೀಕ್ಷೆಯು ಮಾ.28ರಿಂದ ಎಪ್ರಿಲ್ 11ರವರೆಗೆ ನಡೆಯಲಿದೆ.
Next Story