ಬೆಂಗಳೂರು: ಎಟಿಎಂ ಯಂತ್ರದ ಜೊತೆಗೆ ಸಿಸಿಟಿವಿ ಡಿವಿಆರ್ ಕಳವು
ಸಾಂದರ್ಭಿಕ ಚಿತ್ರ
ಬೆಂಗಳೂರು, ಎ.17: ದುಷ್ಕರ್ಮಿಗಳು ಎಟಿಎಂ ಯಂತ್ರದ ಜೊತೆಗೆ ಸಿಸಿಟಿವಿ ಡಿವಿಆರ್ ಕೂಡ ಕಳ್ಳತನ ಮಾಡಿರುವ ಘಟನೆ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.
ಚಿಕ್ಕಗೊಲ್ಲರಹಟ್ಟಿಯ ಎಸ್ಬಿಐ ಬ್ಯಾಂಕ್ನ ಎಟಿಎಂ ಕೇಂದ್ರಕ್ಕೆ ಭದ್ರತಾ ಸಿಬ್ಬಂದಿ ಇಲ್ಲದಿರುವುದನ್ನು ನೋಡಿ ದುಷ್ಕರ್ಮಿಗಳು ಎಟಿಎಂ ಯಂತ್ರವನ್ನು ಹೊಡೆದು ಹಣ ದೋಚಲು ಸಾಧ್ಯವಾಗದೇ ಯಂತ್ರದ ಜೊತೆಗೆ ಸಿಸಿಟಿವಿ ಡಿವಿಆರ್ ಕೂಡ ಕಳವು ಮಾಡಿ ಪರಾರಿಯಾಗಿದ್ದಾರೆ.
ಘಟನೆ ಸಂಬಂಧ ಮಾದನಾಯಕನ ಹಳ್ಳಿ ಠಾಣಾ ಫೋಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
Next Story