Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮನೆ ಮಾತು ಯಾವುದೇ ಆಗಿರಲಿ ಕರ್ನಾಟಕದಲ್ಲಿ...

ಮನೆ ಮಾತು ಯಾವುದೇ ಆಗಿರಲಿ ಕರ್ನಾಟಕದಲ್ಲಿ ಎಲ್ಲಾ ಮಕ್ಕಳು ಕನ್ನಡ ಭಾಷೆ ಕಲಿಯುವುದು ಅವಶ್ಯಕ: ಅಬ್ದುಲ್ ರೆಹಮಾನ್ ಪಾಷ

ವಾರ್ತಾಭಾರತಿವಾರ್ತಾಭಾರತಿ12 May 2022 12:16 AM IST
share
ಮನೆ ಮಾತು ಯಾವುದೇ ಆಗಿರಲಿ ಕರ್ನಾಟಕದಲ್ಲಿ ಎಲ್ಲಾ ಮಕ್ಕಳು ಕನ್ನಡ ಭಾಷೆ ಕಲಿಯುವುದು ಅವಶ್ಯಕ: ಅಬ್ದುಲ್ ರೆಹಮಾನ್ ಪಾಷ

ಬೆಂಗಳೂರು, ಮೇ 11: ಮನೆ ಮಾತು ಯಾವುದೇ ಆಗಿರಲಿ ಕರ್ನಾಟಕದಲ್ಲಿ ಎಲ್ಲಾ ಮಕ್ಕಳು ಕನ್ನಡ ಭಾಷೆಯನ್ನು ಚೆನ್ನಾಗಿ ಕಲಿಯುವುದು ಅವಶ್ಯಕ ಅಷ್ಟೇ ಅಲ್ಲ ಹಲವು ಬಗೆಯಲ್ಲಿ ಪ್ರಯೋಜನಕಾರಿಯಾದುದು, ಕರ್ನಾಟಕದ ವ್ಯಕ್ತಿಯ ಪರಿಪೂರ್ಣ ವಿಕಸನ ಆಗುವುದು ಕನ್ನಡದಲ್ಲಿ ಸಾಧ್ಯ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಪ್ರೊ.ಅಬ್ದುಲ್ ರೆಹಮಾನ್ ಪಾಷ ತಿಳಿಸಿದರು. ಅವರು

ಮುಸ್ಲಿಂ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ(ಫೆಮಿ) ಮತ್ತು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್(ಐಟಾ) ಇದರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಯಶವಂತಪುರದ ಜಾಮಿಯಾ ಮಸೀದಿಯ ಆವರಣದ ಇಸ್ಲಾಮಿಕ್ ಸೆಂಟರ್‍ನಲ್ಲಿ ನಡೆದ ಕಾರ್ಯಶಿಬಿರದಲ್ಲಿ ಮಾತನಾಡಿದರು.

ನಗರದ 25 ಶಿಕ್ಷಕಿಯರು ಭಾಗವಹಿಸಿದ್ದ ಕಾರ್ಯಾಗಾರದಲ್ಲಿ ಪ್ರಮುಖವಾಗಿ ಉರ್ದು ಮಾತೃಭಾಷೆಯ  ಹಿನ್ನೆಲೆಯಿಂದ ಬಂದು ಇಂಗ್ಲೀಷ್ ಮಾಧ್ಯಮ ಶಾಲೆಗಳಲ್ಲಿ ಓದುತ್ತಿರುವ ನಗರದ ಮಕ್ಕಳಿಗೆ ಕನ್ನಡ ಭಾಷಾ ಕೌಶಲಗಳನ್ನು ಕಲಿಸುವಲ್ಲಿ ಇರುವ ಸವಾಲುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಉದ್ದೇಶ ಈ 'ಕನ್ನಡ ಕಲಿಸುವ ಶಿಕ್ಷಕರ' ಕಾರ್ಯಶಿಬಿರದ್ದಾಗಿದೆ. ಕನ್ನಡ ಭಾಷೆಯ ಕುರಿತು ಮಕ್ಕಳಲ್ಲಿ ಪ್ರೀತಿ ಮೂಡಿಸಿ, ಕನ್ನಡವನ್ನು ಚೆನ್ನಾಗಿ ಕಲಿಯುವ ಪ್ರಯೋಜನವನ್ನು ಮಕ್ಕಳಿಗೆ ಮನವರಿಕೆ ಮಾಡಿಸುವುದು ಹೇಗೆ ಎಂದು ಚರ್ಚಿಸಲಾಯಿತು.

ಭಾಷೆ ವಿಜ್ಞಾನಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಅಬ್ದುಲ್ ರೆಹಮಾನ್ ಪಾಷ ಶಿಬಿರ ನಿರ್ದೇಶಕರಾಗಿದ್ದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಉಪಾಧ್ಯಕ್ಷ ಡಾ. ರಾಜಾ ನಾಯ್ಕ್ ಮಾತನಾಡಿ, ಎಲ್ಲಾ ಭಾಷೆಗಳು ಚಿನ್ನದಂತಹ ಭಾಷೆಗಳು. ಮಾತೃಭಾಷೆಯಲ್ಲಿ ಪರಿಣತಿ ಇದ್ದರೆ ಪ್ರಪಂಚದ ಯಾವುದೇ ಭಾಷೆಯನ್ನು ಕಲಿಯಬಹುದು. ಸಾಮಾಜಿಕ ಬದುಕನ್ನು ಯಶಸ್ವಿಯಾಗಿಸಲು ಎಲ್ಲರೂ ಕನ್ನಡವನ್ನು ಚೆನ್ನಾಗಿ ಕಲಿಯಬೇಕು. ಭಾಷೆಯಲ್ಲಿ ಪರಿಣತಿ ಸಿಕ್ಕಾಗ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜಮಾಅತೆ ಇಸ್ಲಾಮೀ ಹಿಂದ್ ಕಾರ್ಯದರ್ಶಿ  ಮೌಲಾನ ವಹೀದುದ್ದೀನ್ ಖಾನ್ ಮಾತನಾಡಿ, ಪರಸ್ಪರರನ್ನು ಅರಿಯಲು ಭಾಷೆ ಸಹಕಾರಿ. ಪ್ರತಿಯೊಂದು ಸಂಸ್ಕೃಯ ಬುನಾದಿ ಭಾಷೆಯಾಗಿದೆ. ಭಾಷೆ ಕಲಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಎಂದು ತಿಳಿಸಿದರು.

ಐಟಾ ಮುಖ್ಯಸ್ಥ ಪ್ರೊ. ಸನಾವುಲ್ಲಾ, ಫೆಮಿ ಮುಖ್ಯಸ್ಥ ಇಕ್ಬಾಲ್ ಅಹಮದ್, ಇಸ್ಲಾಮೀ ಮಾಹಿತಿ ಕೇಂದ್ರದ ಮುಖ್ಯಸ್ಥ ಎಮ್. ನವಾಝ್, ಶಿಬಿರ ನಿರ್ವಾಹಕ ಹಾರೂನ್ ಬಾಷ ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X