ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ
ಪ್ರತಾಪ್ ರೆಡ್ಡಿ
ಬೆಂಗಳೂರು, ಮೇ 16: ಹಿರಿಯ ಐಪಿಎಸ್ ಅಧಿಕಾರಿ ಸಿ.ಎಚ್.ಪ್ರತಾಪ್ ರೆಡ್ಡಿ ಅವರನ್ನು ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
1991 ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ, ಆಂಧ್ರಪ್ರದೇಶದ ಗುಂಟೂರು ಮೂಲದವರು. ಬೆಂಗಳೂರಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದರು. ಕಾನೂನು ಸುವ್ಯವಸ್ಥೆ ಎಡಿಜಿಪಿ ಹುದ್ದೆಯಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.
ನಿಕಟಪೂರ್ವ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಬೆಂಗಳೂರು ನೇಮಕಾತಿ ವಿಭಾಗದ ಡಿಜಿಯಾಗಿ ವರ್ಗಾಯಿಸಲಾಗಿದೆ. ಅದೇ ರೀತಿ, ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಕುಮಾರ್ ನಿಯುಕ್ತಿಗೊಂಡಿದ್ದಾರೆ. ಕೆಎಸ್ಆರ್ಪಿ ಎಡಿಜಿಪಿಯಾಗಿ ಆರ್.ಹಿತೇಂದ್ರ ಹಾಗೂ ಸಿಐಡಿ ಎಸ್ಪಿಯಾಗಿ ಎಂ.ಎನ್.ಅನುಚೇತ್ ನೇಮಕಗೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story