ಬೆಂಗಳೂರಿನ ಪೊಲೀಸ್ ಆಯುಕ್ತರಾಗಿ ಸಿ.ಎಚ್. ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ
ಬೆಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸಿ.ಎಚ್. ಪ್ರತಾಪ್ ರೆಡ್ಡಿ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಕಮಿಷನರ್ ಕಮಲ್ ಪಂತ್ ಅವರು ಕಮಿಷನರ್ ಕಚೇರಿಯಲ್ಲಿ ಬ್ಯಾಟನ್ ನೀಡುವ ಮೂಲಕ ನೂತನ ಆಯುಕ್ತಗೆ ಅಧಿಕಾರ ಹಸ್ತಾಂತರಿಸಿದರು.
1991 ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ, ಆಂಧ್ರಪ್ರದೇಶದ ಗುಂಟೂರು ಮೂಲದವರು. ಬೆಂಗಳೂರಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದರು. ಇದೀಗ ಕಾನೂನು ಸುವ್ಯವಸ್ಥೆ ಎಡಿಜಿಪಿ ಹುದ್ದೆಯಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ.
Next Story