ಪಿಎಸ್ಸೈ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಹೆಡ್ಕಾನ್ಸ್ಟೇಬಲ್ ಮನೆಯಲ್ಲಿ ಕೋಟ್ಯಂತರ ರೂ. ಪತ್ತೆ
ಬೆಂಗಳೂರು, ಮೇ 17: ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ಕಾನ್ಸ್ಟೇಬಲ್ ಶ್ರೀಧರ್ ಮನೆಯಲ್ಲಿ 1.55 ಕೋಟಿ ರೂ. ಹಣ ಪತ್ತೆಯಾಗಿದೆ.
ಮಂಗಳವಾರ ಸಿಐಡಿ ಅಧಿಕಾರಿಗಳ ದಾಳಿ ವೇಳೆ ಸುಮಾರು 20 ಲಕ್ಷ ಹಣ ಪತ್ತೆಯಾಗಿತ್ತು. ಮತ್ತೊಂದು ಮನೆಯಲ್ಲೂ ಶೋಧಿಸಿದಾಗ 1.55 ಕೋಟಿ ಹಣ ಸಿಕ್ಕಿದೆ ಎಂದು ತಿಳಿದುಬಂದಿದೆ.
ನೇಮಕಾತಿ ಹಗರಣದಲ್ಲಿ ಸಿಐಡಿ ಪೊಲೀಸರು ಇತ್ತೀಚಿಗೆ ಶ್ರೀಧರ್ರನ್ನ ಬಂಧಿಸಿದ್ದರು.
Next Story