Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ...

ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿಯಲು ಸಿದ್ದರಾಮಯ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 May 2022 4:20 PM IST
share
ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿಯಲು ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಮೇ 18: ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಕೇಳಿಬರುತ್ತಿರುವ ಆಕ್ಷೇಪಗಳ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯದ ಮುದ್ರಣವನ್ನು ತಕ್ಷಣ ತಡೆಹಿಡಿದು ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಚಿಂತಕರ ಜೊತೆ ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳೇ ನಿಜವೆಂದಾದರೆ ಇದು ಅಕ್ಷಮ್ಯ ಅಪರಾಧ. ಈ ಹಿನ್ನೆಲೆಯಲ್ಲಿ ಅನಗತ್ಯ ಊಹಾಪೋಹ ಮತ್ತು ಸಂಘರ್ಷಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿಯೇ ಖುದ್ದಾಗಿ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವಕ್ಕೆ ಪಾತ್ರರಾಗಿರುವ ಸಾಹಿತಿಗಳು, ಚಿಂತಕರು ಮತ್ತು ಶಿಕ್ಷಣ ತಜ್ಞರಿರುವಾಗ ಸಂಘ ಪರಿವಾರಕ್ಕೆ ಸೇರಿದ ತಿಳಿಗೇಡಿ ಯುವಕನಿಂದ ಪಠ್ಯ ಪರಿಷ್ಕರಣೆ ಮಾಡಿಸಿರುವುದು ರಾಜ್ಯದ ಜನತೆಗೆ ಮಾಡಿರುವ ಅವಮಾನ. ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆತಗ್ಗಿಸುವಂತಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯಂತಹ ಗಂಭೀರ ಕಾರ್ಯವನ್ನು ನಾಡಿನ ಹಿರಿಯ ಲೇಖಕರು, ಸಮಾಜ ಸುಧಾರಕರನ್ನು ಅವಹೇಳನ ಮಾಡುತ್ತಾ ಬಂದಿರುವ ಅನರ್ಹ, ಪೂರ್ವಗ್ರಹ ಪೀಡಿತ ವ್ಯಕ್ತಿಯಿಂದ ಮಾಡಿಸಿರುವುದೇ ನಾಡು-ನುಡಿಗೆ ಬಗೆದಿರುವ ದ್ರೋಹ ಎಂದವರು ಖಂಡಿಸಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ನೀಡಿರುವ ಕರಡನ್ನು ತಕ್ಷಣ ವಾಪಸ್ ಪಡೆದು ಸಮಿತಿಯನ್ನು ಬರ್ಖಾಸ್ತುಗೊಳಿಸಬೇಕು ಮತ್ತು ನಾಡಿನ ಚಿಂತಕರು ಮತ್ತು ಶಿಕ್ಷಣ ತಜ್ಞರ ಜೊತೆ ಸಮಾಲೋಚನೆ ನಡೆಸಿ ಹೊಸ ಸಮಿತಿಯನ್ನು ರಚಿಸಬೇಕು ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸುತ್ತೇನೆ.

ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿ ಅದಕ್ಕೆ ಇರುವ ಪಾವಿತ್ರ್ಯವನ್ನು ಹಾಳುಗೆಡಹಿದ ಬಿಜೆಪಿ ಈಗ ಎಳೆಯ ಮಕ್ಕಳ ಬುದ್ದಿಕೆಡಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ರಾಜಕೀಯದ ಅಖಾಡ ಮಾಡಲು ಹೊರಟಿರುವುದು ಖಂಡನೀಯ. ನಾಡಿನ ಪ್ರಜ್ಞಾವಂತರೆಲ್ಲರೂ ಇದರ ವಿರುದ್ಧ ದನಿ ಎತ್ತಬೇಕಾಗಿದೆ.

ರಾಜಕೀಯ ಪಕ್ಷಗಳಿಗೆ ತಮಗೆ ಸರಿಕಂಡ ವ್ಯಕ್ತಿಗಳನ್ನು ಆರಾಧಿಸುವ, ಅವರ ಚಿಂತನೆಗಳನ್ನು ಪ್ರಚಾರಮಾಡುವ ಅಧಿಕಾರವಿದೆ, ಆದರೆ ಶಿಕ್ಷಣ ಕ್ಷೇತ್ರವನ್ನು ಸ್ವಾರ್ಥ ರಾಜಕೀಯದ ರಾಡಿಯಿಂದ ಮಲಿನಗೊಳಿಸ ಬಾರದು.

ಬುದ್ದ, ಬಸವಣ್ಣ, ಅಂಬೇಡ್ಕರ್, ನಾರಾಯಣ ಗುರುಗಳು ಜಾತಿ,ಧರ್ಮ, ಪಕ್ಷ, ಪಂಥಗಳನ್ನು ಮೀರಿದ ಚೇತನಗಳು. ಇವರನ್ನು ಸ್ವಾರ್ಥ ರಾಜಕೀಯಕ್ಕೆ ದುರ್ಬಳಕೆ ಮಾಡಬಾರದು. ರಾಜಕೀಯ ದುರುದ್ದೇಶದಿಂದ ಮಾಡುವ ಈ ರೀತಿಯ ಅವಮಾನವನ್ನು ಸಹಿಸಲಾಗದು.

ಹೆಡಗೆವಾರ್, ಗೋಲ್ವಾಲ್ಕರ್, ಗೋಡ್ಸೆ ಮೊದಲಾದವರನ್ನು ತಮ್ಮ ಪಕ್ಷದ ವೇದಿಕೆಯಲ್ಲಿ ಮೆರೆದಾಡಿಸಲಿ, ಇವರ ಚಿತ್ರಗಳನ್ನೇ ಪ್ರದರ್ಶಿಸಿ ಚುನಾವಣೆಗಳಲ್ಲಿ ಮತಕೇಳಲಿ, ಪ್ರಜ್ಞಾವಂತ ಜನರು ತಪ್ಪು-ಸರಿಗಳನ್ನು ನಿರ್ಧರಿಸುತ್ತಾರೆ. ಶಿಕ್ಷಣ ಕ್ಷೇತ್ರವನ್ನು ರಾಜಕೀಯ ಸ್ವಾರ್ಥಕ್ಕಾಗಿ ಬಲಿಕೊಡಬೇಡಿ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X