-

ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ, ಮಳೆ ಸಂತ್ರಸ್ತರಿಗೆ ಪರಿಹಾರ ನೀಡಿ: ಎಎಪಿ

-

ಬೆಂಗಳೂರು, ಮೇ 18: ನಗರದ ಜನರು ಮಳೆಗೆ ತತ್ತರಿಸಿ, ಕೆಲವರು ಪ್ರಾಣ ಕಳೆದುಕೊಂಡಿರುವುದಕ್ಕೆ ರಾಜ್ಯ ಬಿಜೆಪಿ ಸರಕಾರದ ಭ್ರಷ್ಟಾಚಾರ ಹಾಗೂ ಬೇಜವಾಬ್ದಾರಿಯೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ಟೀಕಿಸಿದೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ಮುಖಂಡ ಮೋಹನ್ ದಾಸರಿ ಅವರು, ರಾಜಕಾಲುವೆ ಹೆಸರಿನಲ್ಲಿ ಬಿಜೆಪಿ ಸರಕಾರವು ಸಾವಿರಾರು ಕೋಟಿ ರೂ.ಗಳನ್ನು ಲೂಟಿ ಮಾಡಿದ ಪರಿಣಾಮ, ಜನರು ರಸ್ತೆಗಳಲ್ಲಿ ಓಡಾಡಲು ದೋಣಿಯನ್ನು ಬಳಸಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ತಗ್ಗು ಪ್ರದೇಶದಲ್ಲಿರುವ ಜನರು ಮಳೆಗಾಲದಲ್ಲಿ ಜೀವ ಕೈಯಲ್ಲಿಟ್ಟುಕೊಂಡು ಜೀವನ ನಡೆಸುವಂತಾಗಿದೆ. ತಾವಿದ್ದ ಸ್ಥಳದಲ್ಲಿ ನೀರು ತುಂಬಿಕೊಂಡಿದ್ದರಿಂದ ಮಂಗಳವಾರ ರಾತ್ರಿ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಇಷ್ಟೆಲ್ಲ ಅನಾಹುತಕ್ಕೆ ಕಾರಣವಾಗಿರುವ ಭ್ರಷ್ಟ ಬಿಜೆಪಿ ನಾಯಕರ ಆಸ್ತಿಗಳನ್ನು ಸರಕಾರ ಮುಟ್ಟುಗೋಲು ಹಾಕಿಕೊಂಡು, ಅದನ್ನು ಹರಾಜು ಹಾಕಿ, ಬಂದ ಹಣದಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ನಗರದಲ್ಲಿ ಸಣ್ಣ ಮಳೆಯಾದರೂ ಕಟ್ಟಡಗಳಿಗೆ ನೀರು ನುಗ್ಗಿ ಜಲಪ್ರಳಯ ಆಗುವುದು ಸಾಮಾನ್ಯವಾಗಿದೆ. ರಾಜಕಾಲುವೆ ಒತ್ತುವರಿಯೇ ಇದಕ್ಕೆ ಮುಖ್ಯ ಕಾರಣವಾಗಿದೆ. ರಾಜಕಾಲುವೆ ಒತ್ತುವರಿ ತೆರವು ಎಂಬ ಮಾಯಾಜಾಲವು 2016ರಿಂದಲೂ ನಿಗೂಢವಾಗಿಯೇ ಉಳಿದಿದೆ. 2,626 ಕಟ್ಟಡಗಳ ಪೈಕಿ 1,480 ಕಟ್ಟಡಗಳು ತೆರವಾಗಿದ್ದು, 714 ಕಟ್ಟಡಗಳ ತೆರವಿಗೆ ಇನ್ನೂ ಮುಹೂರ್ತ ಕೂಡಿ ಬಂದಿಲ್ಲ. ರಾಜಕಾಲುವೆ ಮೇಲೆ ವಸತಿ ಮತ್ತು ವಾಣಿಜ್ಯ ಕಟ್ಟಡಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವುಗಳನ್ನು ತೆರವುಗೊಳಿಸಲು ಪಾಲಿಕೆ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂದು ಅವರು ಹೇಳಿದರು.

ರಾಜಕಾಲುವೆ ಒತ್ತುವರಿ ತೆರವಿಗೆ ಬಿಬಿಎಂಪಿ ತೀರ್ಮಾನ ಮಾಡಿದ್ದು, 714 ಕಟ್ಟಡಗಳ ಪಟ್ಟಿಯನ್ನು ಸಿದ್ಧಪಡಿಸಿತ್ತು. ಪೂರ್ವ ವಲಯದಲ್ಲಿ 110 ಕಟ್ಟಡ, ಪಶ್ಚಿಮ ವಲಯದಲ್ಲಿ 59 ಕಟ್ಟಡ, ದಕ್ಷಿಣ ವಲಯದಲ್ಲಿ 20 ಕಟ್ಟಡ, ಕೋರಮಂಗಲ ವ್ಯಾಲಿ ವಲಯದಲ್ಲಿ 3 ಕಟ್ಟಡ, ಯಲಹಂಕ ವಲಯದಲ್ಲಿ 103 ಕಟ್ಟಡ, ಮಹದೇವಪುರ ವಲಯದಲ್ಲಿ 184 ಕಟ್ಟಡ, ಬೊಮ್ಮನಹಳ್ಳಿ ವಲಯದಲ್ಲಿ 92 ಕಟ್ಟಡ, ಆರ್.ಆರ್. ನಗರ ವಲಯದಲ್ಲಿ 9 ಕಟ್ಟಡ ಹಾಗೂ ದಾಸರಹಳ್ಳಿ ವಲಯದಲ್ಲಿ 134 ಕಟ್ಟಡಗಳನ್ನು ತೆರವು ಮಾಡಲು ಪಟ್ಟಿ ಮಾಡಲಾಗಿದೆ. ಆದರೆ ಕ್ರಮ ಮಾತ್ರ ಕೈಗೊಂಡಿಲ್ಲ ಎಂದು ಮೋಹನ್ ದಾಸರಿ ಹೇಳಿದರು.

ರಾಜಕಾಲುವೆ ಮೀಸಲು ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿರುವ ಅಪಾರ್ಟ್‍ಮೆಂಟ್‍ಗಳನ್ನು ತೆರವು ಮಾಡುವಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯೂ ಆದೇಶ ನೀಡಿದೆ. ಆದರೆ ತೆರವು ಕಾರ್ಯಾಚರಣೆ ಮಾತ್ರ ಮುಂದುವರೆದಿಲ್ಲ. ಪ್ರತಿ ಸಲದಂತೆ ಈ ಬಾರಿ ಬಿಬಿಎಂಪಿಯು ಜೋರು ಮಳೆ ಬಿದ್ದಾಗ ಪ್ರವಾಹ ಪರಿಸ್ಥಿತಿ ಉಂಟಾಗುವ 209 ಪ್ರದೇಶಗಳನ್ನು ಗುರುತಿಸಿದೆ. ಪ್ರತಿ ವರ್ಷವೂ ಮಳೆಯಿಂದ ಕೋಟ್ಯಾಂತರ ರೂ. ಆಸ್ತಿಪಾಸ್ತಿ ನಷ್ಟವಾಗುತ್ತಿದೆ. ಕೆಲವರು ಪ್ರಾಣವನ್ನೂ ಕಳೆದುಕೊಳ್ಳುತ್ತಿದ್ದಾರೆ. ಇಷ್ಟಾದರೂ ಪಾಲಿಕೆಯು ಯುದ್ಧ ಕಾಲದಲ್ಲಿ ಶಸ್ತ್ರಾಸ್ತ್ರ ಅಭ್ಯಾಸ ಎಂಬಂತೆ ಮಳೆಗಾಲ ಶುರುವಾದ ಬಳಿಕ ಕೆಲವೊಂದು ಕಾಮಗಾರಿಗಳನ್ನು ಕೈಗೊಂಡು ಜನರ ಕಣ್ಣೊರೆಸುವ ತಂತ್ರವನ್ನು ಅನುಸರಿಸುತ್ತಲೇ ಬರುತ್ತಿದೆ ಎಂದು ಅವರು ಕಿಡಿ ಕಾರಿದರು. 

ನಗರದ ಬಹುತೇಕ ಆಸ್ಪತ್ರೆಗಳು, ಕಮರ್ಷಿಯಲ್ ಬಿಲ್ಡಿಂಗ್‍ಗಳು, ಉದ್ಯಮಿಗಳು, ರಾಜಕಾರಿಣಿಗಳು ಸೇರಿದಂತೆ ಹಲವು ಪ್ರಭಾವಿಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ. ಇದರ ತೆರವು ಕಾರ್ಯಾಚರಣೆ ಮಾತ್ರ ನಡೆದಿಲ್ಲ. ರಾಜಾಜಿನಗರ, ಕೆ.ಆರ್.ಪುರ, ಕೆಂಗೇರಿ, ಆರ್.ಆರ್.ನಗರ, ಹೆಬ್ಬಾಳ, ಯಲಹಂಕ, ಲಗ್ಗೆರೆ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಜಕಾಲುವೆಗಳ ಒತ್ತುವರಿ ಆಗಿದೆ. ಪಾಲಿಕೆ ಅಧಿಕಾರಿಗಳನ್ನು ಕೇಳಿದರೆ, ಸಮೀಕ್ಷೆ ಮಾಡುತ್ತಿದ್ದೇವೆ, ಆದಷ್ಟು ಬೇಗ ವರದಿ ಸಿದ್ಧವಾಗುತ್ತದೆ ಎನ್ನುತ್ತಾರೆ. ಆದರೆ ಬಿಬಿಎಂಪಿ ಮುಖ್ಯ ಕಚೇರಿಯ ಕೂಗಳತೆ ದೂರದಲ್ಲಿರುವ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳು ಮುಂದಾಗದಿರುವುದು ವಿಪರ್ಯಾಸವಾಗಿದೆ. 
-ಮೋಹನ್ ದಾಸರಿ, ಎಎಪಿ ಮುಖಂಡ

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top