ಬೆಂಗಳೂರು: ಸ್ನೇಹಿತರ ಜೊತೆ ಈಜಲು ಹೋಗಿದ್ದ ಬಾಲಕ ನೀರು ಪಾಲು
ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 19: ಈಜಲು ತೆರಳಿದ್ದ ಬಾಲಕನೋರ್ವ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹೆಸರಘಟ್ಟ ಕೆರೆಯಲ್ಲಿ ನಡೆದಿದೆ.
ಎಂ.ಎಸ್.ಪಾಳ್ಯದ ಆಖೀಬ್(16) ಮೃತ ಬಾಲಕ ಎಂದು ಪೊಲೀಸರು ತಿಳಿಸಿದ್ದಾರೆ.
ಅಮೀನ್, ಅನ್ವರ್ ಎಂಬ ಸ್ನೇಹಿತರ ಜೊತೆ ಈಜಲು ತೆರಳಿದ್ದ. ಆದರೆ, ಕೆರೆಯ ಆಳ ತಿಳಿಯದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಎಸೆಸೆಲ್ಸಿ ಪರೀಕ್ಷೆ ಬರೆದಿದ್ದ ಯುವಕ ಇವತ್ತು ಫಲಿತಾಂಶ ಬರುವ ದಿನ ಮೊದಲೇ ಬಾಲಕ ಸಾವಿಗೀಡಾಗಿದ್ದು, ಮಗನನ್ನು ಕಳೆದುಕೊಂಡ ಕುಟುಂಬ ದುಃಖತಪ್ತರಾಗಿದ್ದಾರೆ ಎಂದು ತಿಳಿದುಬಂದಿದೆ.
ಪೀಣ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿ ಬಾಲಕನ ಮೃತದೇಹವನ್ನು ಹೊರತೆಗೆದರು. ಈ ಸಂಬಂಧ ಸೋಲದೇವನಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ
Next Story