Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ:...

ಸರಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ: ಎಎಪಿಯಿಂದ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ20 May 2022 9:26 PM IST
share
ಸರಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ: ಎಎಪಿಯಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು, ಮೇ 20: ಕಳೆದ ಏಳೂವರೆ ವರ್ಷಗಳಿಂದ ಮುಚ್ಚಲ್ಪಟ್ಟಿರುವ ನಗರದ ಗವಿಪುರಂ ಗುಟ್ಟಳ್ಳಿಯ ಕೆಂಪೇಗೌಡ ಮುಖ್ಯರಸ್ತೆಯ ಸರಕಾರಿ ಬಾಲಕರ ಪ್ರೌಢಶಾಲೆಯ ಎದುರು ಎಎಪಿ ಮುಖಂಡರು ಉಪವಾಸ ಸತ್ಯಾಗ್ರಹ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಉಪವಾಸ ಸತ್ಯಾಗ್ರಹದ ನೇತೃತ್ವದ ವಹಿಸಿದ್ದ ಎಎಪಿ ಬೆಂಗಳೂರು ಯುವ ಘಟಕದ ಅಧ್ಯಕ್ಷ ಪ್ರಕಾಶ್ ಎನ್. ಮಾತನಾಡಿ, “ಸ್ಥಳೀಯ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರ ನಿರ್ಲಕ್ಷ್ಯದಿಂದಾಗಿ ಕ್ಷೇತ್ರದ ಸರಕಾರಿ ಶಾಲೆಗಳು ಶೋಚನೀಯ ಸ್ಥಿತಿ ತಲುಪಿವೆ. ಕೇವಲ ಸುಂಕೇನಹಳ್ಳಿ ವಾರ್ಡ್‍ನಲ್ಲೇ ನಾಲ್ಕು ಸರಕಾರಿ ಶಾಲೆಗಳ ಪೈಕಿ ಮೂರು ಸರಕಾರಿ ಶಾಲೆಗಳು ಮುಚ್ಚಲ್ಪಟ್ಟಿದ್ದು, ಉಳಿದಿರುವ ಇನ್ನೊಂದು ಶಾಲೆಯು ಮುಚ್ಚುವ ಹಂತದಲ್ಲಿದೆ. ಪ್ರಭಾವಿ ವ್ಯಕ್ತಿಗಳ ಒಡೆತನದ ಖಾಸಗಿ ಶಾಲೆಗಳಿಗೆ ಲಾಭ ಮಾಡಿಕೊಡಲು ಸರಕಾರಿ ಶಾಲೆಗಳು ಪುನರಾರಂಭ ಆಗದಂತೆ ಶಾಸಕರು ಪಿತೂರಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, “ಸರಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸರಕಾರಕ್ಕೆ ಹಣದ ಕೊರತೆಯಿಲ್ಲ. ಆದರೆ ಇಚ್ಛಾಶಕ್ತಿಯ ಕೊರತೆಯಿದೆ. ಎಲ್ಲೆಲ್ಲಿ ಭಾರೀ ಪ್ರಮಾಣದ ಅಕ್ರಮ ಮಾಡಲು ಸಾಧ್ಯವಿದೆಯೋ, ಅಲ್ಲಿ ಮಾತ್ರ ಬಿಜೆಪಿ ಸರಕಾರವು ಹಣ ವಿನಿಯೋಗಿಸುತ್ತಿದೆ. ಭ್ರಷ್ಟ ಬಿಜೆಪಿ ಸರಕಾರದ ಹಣದ ದಾಹದಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳು ಕೂಡ ದುಬಾರಿ ಬೆಲೆ ತೆತ್ತು ಖಾಸಗಿ ಶಾಲೆಗಳಿಗೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದರು.

ಆಮ್ ಆದ್ಮಿ ಪಾರ್ಟಿ ಮುಖಂಡ ಮಾಜಿ ಸಂಸದ ಡಾ. ವೆಂಕಟೇಶ್, ಸುರೇಶ್ ರಾಥೋಡ್, ಮಾವಳ್ಳಿ ಕೃಷ್ಣ ಸೇರಿದಂತೆ ಅನೇಕ ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇನ್ನೆರಡು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಈವರೆಗೂ ಜನರ ಕೈಗೆ ಸಿಗದ ಆಡಳಿತಾರೂಢ ಬಿಜೆಪಿ ನಾಯಕರು ಚುನಾವಣೆ ಸಮೀಪಿಸುತ್ತಿದ್ದಂತೆ ಮನೆ ಬಾಗಿಲಿಗೆ ಬರಲಿದ್ದಾರೆ. ಎಎಪಿ ಆಡಳಿತವಿರುವ ದೆಹಲಿಯಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯವಾಗಿರುವಾಗ, ಬೆಂಗಳೂರಿನಲ್ಲಿ ಏಕೆ ಸಾಧ್ಯವಾಗಿಲ್ಲ? ಎಂದು ಬಿಜೆಪಿ ನಾಯಕರನ್ನು ಜನರು ಪ್ರಶ್ನಿಸಬೇಕಿದೆ.

-ಭಾಸ್ಕರ್ ರಾವ್, ಎಎಪಿ ಮುಖಂಡ ಹಾಗೂ ಮಾಜಿ ಐಪಿಎಸ್ ಅಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X