ನಾಳೆ (ಮೇ 27) ಸಚಿವಾಲಯ ಬಂದ್‌ಗೆ ಕರೆ ಕೊಟ್ಟ ನೌಕರರು; ಪ್ರತಿಭಟನೆ ಕಾನೂನುಬಾಹಿರ ಎಂದ ಸರಕಾರ | Vartha Bharati- ವಾರ್ತಾ ಭಾರತಿ

--

ನಾಳೆ (ಮೇ 27) ಸಚಿವಾಲಯ ಬಂದ್‌ಗೆ ಕರೆ ಕೊಟ್ಟ ನೌಕರರು; ಪ್ರತಿಭಟನೆ ಕಾನೂನುಬಾಹಿರ ಎಂದ ಸರಕಾರ

ಬೆಂಗಳೂರು, ಮೇ 26: ಸಚಿವಾಲಯದ 542 ಕಿರಿಯ ಸಹಾಯಕರ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಕೈಬಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು(ಮೇ 27) ಸಚಿವಾಲಯ ಬಂದ್ ಮಾಡಿ ಹೋರಾಟ ನಡೆಸಲು ಕರ್ನಾಟಕ ಸರಕಾರ ಸಚಿವಾಲಯದ ನೌಕರರ ಸಂಘ ಮುಂದಾಗಿದೆ.

ಈ ಕುರಿತು ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ಮಾಹಿತಿ ನೀಡಿದ್ದು, ಶುಕ್ರವಾರದಂದು ಸಾಮೂಹಿಕವಾಗಿ ರಜೆ ಹಾಕುವ ಮೂಲಕ ಸಚಿವಾಲಯ ಬಂದ್ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು. 

ಆಡಳಿತ ಸುಧಾರಣೆಯ ನೆಪದಲ್ಲಿ ಸಚಿವಾಲಯದ ಹಲವು ಶಾಖೆಗಳನ್ನು ವಿಲೀನ ಅಥವಾ ರದ್ದುಗೊಳಿಸಲು ಸರಕಾರ ಮುಂದಾಗಿದೆ. ಅಲ್ಲದೆ, ಸಚಿವಾಲಯದ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ವಿರುದ್ಧವಾಗಿ ಕೆಲವು ಕ್ರಮಗಳನ್ನು ಅನುಸರಿಸುತ್ತಿರುವ ಸರಕಾರದ ನೌಕರ ವಿರೋದಿಯಾಗಿದೆ ಎಂದು ಟೀಕಿಸಿದರು.

ಪ್ರಮುಖವಾಗಿ ಸಚಿವಾಲಯ ಅಧಿಕಾರಿಗಳು ನಿಯೋಜನೆ ಮೇರೆಗೆ ಇತರೆ ಇಲಾಖೆಗೆ ಹೋಗುವ ಅವಕಾಶ ಮರುಸ್ಥಾಪಿಸಬೇಕು, ಯಾವುದೇ ಇಲಾಖೆಯಲ್ಲಿ ಹುದ್ದೆಗಳ ಕಡಿತ ಪ್ರಸ್ತಾವನ ಕೈಬಿಡಬೇಕು ಹಾಗೂ ನಿವೃತ್ತಿಯಾದ ಅಧಿಕಾರಿ, ನೌಕರರ ಮರು ನೇಮಕಾತಿ ರದ್ದು ಮಾಡಬೇಕು ಒಳಗೊಂಡತೆ ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ನಾವು ಹಲವು ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಆದರೆ, ಇದಕ್ಕೆ ಸರಕಾರ ಉತ್ತರಿಸಿಲ್ಲ ಎಂದರು.

ಕಾನೂನುಬಾಹಿರ ಎಂದ ಸರಕಾರ

ಕರ್ನಾಟಕ ಸಚಿವಾಲಯ ನೌಕರರ ಸಂಘ ಮೇ 27ರಂದು ಸಚಿವಾಲಯ ಬಂದ್ ಕರೆ ನೀಡಿದ್ದು, ಸಿಬ್ಬಂದಿಗಳ ಪ್ರತಿಭಟನೆ ಕಾನೂನುಬಾಹಿರ ಎಂದು ರಾಜ್ಯ ಸರಕಾರ ಎಚ್ಚರಿಕೆ ನೀಡಿದೆ.

ಗುರುವಾರ ಈ ಕುರಿತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ನೌಕರರ ಸಂಘದದವರು ಸಚಿವಾಲಯದ ಬಂದ್ ಆಚರಿಸಲು ಕರೆ ನೀಡಿರುವುದು ಕಾನೂನುಬಾಹಿರವಾಗಿರುತ್ತದೆ. ಈ ಕ್ರಮವನ್ನು ಸರಕಾರವು ಬಹಳ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಸಂಘದ ಸಿಬ್ಬಂದಿ ಕಚೇರಿಗೆ ಕಡ್ಡಾಯವಾಗಿ ಹಾಜರಾಗತಕ್ಕದ್ದು. 

ಒಂದು ವೇಳೆ ಸಚಿವಾಲಯದ ಸಿಬ್ಬಂದಿ ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯದೇ ಕಚೇರಿಗೆ ಗೈರು ಹಾಜರಾದಲ್ಲಿ ಅದನ್ನು ಲೆಕ್ಕಕ್ಕಿಲ್ಲದ ಅವಧಿ ಎಂದು ಪರಿಗಣಿಸಲಾಗುವುದು ಎಂದು ಉಲ್ಲೇಖಿಸಿದ್ದಾರೆ.

ಅದು ಅಲ್ಲದೆ, ಅಲ್ಲದೆ, ಕಚೇರಿಗೆ ಹಾಜರಾಗಲು ಇಚ್ಛೆಪಡುವ ಸಿಬ್ಬಂದಿಗೆ ಅಡ್ಡಿ ಪಡಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮವಹಿಸಲಾಗುವುದು ಎಂದು ಅವರು ಹೇಳಿದ್ದಾರೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top