ಆಪ್ ಸೇರ್ಪಡೆಯಾದ ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ತೊರೆದಿದ್ದ ಮಾಜಿ ಎಂಎಲ್ ಸಿ, ಕನ್ನಡ ಚಿತ್ರ ರಂಗದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅಧಿಕೃತವಾಗಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದರು.
ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಅವರಿಗೆ ಟಿಕೆಟ್ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದ ಚಂದ್ರು ಅವರು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಅವರ ಸಮ್ಮುಖ ದಲ್ಲಿ ಆಪ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಬಿ ಭಾಸ್ಕರ್ ರಾವ್ , ಕೆ. ಮಥಾಯ್ ಹಾಗೂ ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು.
Next Story