ರಾಜ್ಯಸಭೆ ಚುನಾವಣೆ; ಎಚ್.ಡಿ.ರೇವಣ್ಣರ ಮತ ಸಿಂಧುಗೊಳಿಸಿದ ಕೇಂದ್ರ ಚುನಾವಣಾ ಆಯೋಗ
ಬೆಂಗಳೂರು: ರಾಜ್ಯ ಸಭೆ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಮತ ಸಿಂಧುಗೊಳಿಸಿ ಕೇಂದ್ರ ಚುನಾವಣಾ ಆಯೋಗ ಆದೇಶ ನೀಡಿದೆ.
ಮತ ಚಲಾಯಿಸಿದ ಬಳಿಕ ತಮ್ಮ ಮತ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ವೀಕ್ಷಕರೂ ಆಗಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ತೋರಿಸಿದ್ದರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನೀಡಿದ್ದ ದೂರನ್ನು ಇತ್ಯರ್ಥಗೊಳಿಸಿರುವ ಕೇಂದ್ರ ಚುನಾವಣಾ ಆಯೋಗ ರೇವಣ್ಣ ಅವರ ಮತವನ್ನು ‘ಸಿಂಧು' ಎಂದು ಪ್ರಕಟಿಸಿರುವುದಾಗಿ ರಾಜ್ಯಸಭಾ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್ ಹಾಗೂ ವಿಧಾನಸಭೆಯ ಬಿಜೆಪಿ ಪಕ್ಷದ ಮುಖ್ಯ ಸಚೇತಕ ಸತೀಶ್ ರೆಡ್ಡಿ ಚುನಾವಣಾಧಿಕಾರಿಗೆ ಲಿಖಿತ ದೂರು ನೀಡಿದ್ದರು.
Next Story